ಬಳ್ಳಾರಿ: ಬಳ್ಳಾರಿಯ ಶೂಟೌಟ್ ಪ್ರಕರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಹಿನ್ನೆಲೆಯಲ್ಲಿ, ಘಟನೆಯ ವೇಳೆ ಸ್ಥಳದಲ್ಲಿದ್ದ ಸತೀಶ್ ರೆಡ್ಡಿ (Satish Reddy) ಅವರ ಇಬ್ಬರು ಗನ್‌ಮ್ಯಾನ್‌ಗಳನ್ನು ಬ್ರೂಸ್‌ಪೇಟೆ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.
ತೀಶ್ ರೆಡ್ಡಿ ಅವರ ಇಬ್ಬರು ಗನ್‌ಮ್ಯಾನ್‌ಗಳನ್ನು(Gunmen)ವಶಕ್ಕೆ ಪಡೆಯಲಾಗಿದ್ದು, ಫೈರಿಂಗ್ ನಡೆದಾಗ ಅವರ ಬಳಿಯಿದ್ದ ಆಯುಧಗಳನ್ನು ಬಳಸಲಾಗಿದೆಯೇ ಎಂಬ ಬಗ್ಗೆ ವಿಚಾರಣೆ ನಡೆಯುತ್ತಿದೆ. ಸತೀಶ್ ರೆಡ್ಡಿ ಅವರು ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಅವರ ಜೊತೆಗಿರುವ ಉಳಿದ ಇಬ್ಬರು ಗನ್‌ಮ್ಯಾನ್‌ಗಳು ಬೆಂಗಳೂರಿನಲ್ಲೇ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಫೈರಿಂಗ್ ನಡೆದ ವೇಳೆ ಗುಂಡು ತಗುಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಮೃತಪಟ್ಟಿದ್ದನು. ಈ ಘಟನೆಗೆ ಸಂಬಂಧಿಸಿದಂತೆ ಸತೀಶ್ ರೆಡ್ಡಿ ಅವರನ್ನು ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ.






