ಬೆಂಗಳೂರು: ನಿರ್ದೇಶಕಿ ಗೀತು ಮೋಹನ್ ದಾಸ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್’ ಚಿತ್ರದ ತಾರಾಬಳಗ ಈಗ ಪೂರ್ಣ ಪ್ರಮಾಣದಲ್ಲಿ ಅನಾವರಣಗೊಳ್ಳುತ್ತಿದೆ. ಚಿತ್ರದಲ್ಲಿ ಪ್ರಮುಖ ಪಾತ್ರವೊಂದನ್ನು ನಿರ್ವಹಿಸುತ್ತಿರುವ ರುಕ್ಮಿಣಿ ವಸಂತ್ (Rukmini Vasanth) ಅವರ ಲುಕ್ ಅನ್ನು ಚಿತ್ರತಂಡ ಹಂಚಿಕೊಂಡಿದೆ.
ಚಿತ್ರದಲ್ಲಿ ರುಕ್ಮಿಣಿ ವಸಂತ್ ಅವರು ‘ಮೆಲಿಸ್ಸಾ’ (Melissa) ಎಂಬ ಪಾತ್ರಕ್ಕೆ ಜೀವ ತುಂಬುತ್ತಿದ್ದಾರೆ. ಸಪ್ತ ಸಾಗರದಾಚೆ ಎಲ್ಲೋ ಮೂಲಕ ಖ್ಯಾತಿ ಗಳಿಸಿದ ರುಕ್ಮಿಣಿ ಈಗ ರಾಕಿ ಭಾಯ್ ಜೊತೆ ತೆರೆ ಹಂಚಿಕೊಳ್ಳುತ್ತಿರುವುದು ಅಭಿಮಾನಿಗಳಲ್ಲಿ ಸಂಚಲನ ಮೂಡಿಸಿದೆ.
ಈಗಾಗಲೇ ಈ ಚಿತ್ರದ ವಿವಿಧ ಪಾತ್ರಗಳಿಗಾಗಿ ಹುಮಾ ಖುರೇಷಿ, ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ ಮತ್ತು ಲೇಡಿ ಸೂಪರ್ ಸ್ಟಾರ್ ನಯನತಾರಾ ಅವರ ಲುಕ್ ಬಿಡುಗಡೆ ಮಾಡಿ ಚಿತ್ರತಂಡ ಕುತೂಹಲ ಕೆರಳಿಸಿತ್ತು. ಇದೀಗ ರುಕ್ಮಿಣಿ ಸೇರ್ಪಡೆಯಿಂದ ಚಿತ್ರದ ತೂಕ ಹೆಚ್ಚಿದೆ.
ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ಈ ಸಿನಿಮಾ ಜಾಗತಿಕ ಮಟ್ಟದ ಮೇಕಿಂಗ್ ಹೊಂದಿದ್ದು, ಕೆವಿಎನ್ ಪ್ರೊಡಕ್ಷನ್ಸ್ (KVN Productions) ಅಡಿಯಲ್ಲಿ ಅದ್ಧೂರಿಯಾಗಿ ನಿರ್ಮಾಣವಾಗುತ್ತಿದೆ.






