ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಅತ್ತಿಘಟ್ಟ ಗ್ರಾಮದಲ್ಲಿ ಸಂಬಂಧಗಳನ್ನೇ ಬೆಚ್ಚಿಬೀಳಿಸುವ ಘಟನೆ ಸಂಭವಿಸಿದೆ. ತನಗೆ ಮದುವೆ ಮಾಡಿಲ್ಲ ಎಂದು ಸಿಟ್ಟಿಗೆದ್ದ ಮಗ ತನ್ನ ಹೆತ್ತ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊ*ಲೆ (Murdered)ಮಾಡಿದ್ದಾನೆ.
ಸಣ್ಣ ನಿಂಗಪ್ಪ (65) ಎಂಬ ವೃದ್ಧ ತಮ್ಮದೇ ಮಗನ ಕೈಯಲ್ಲಿ ಪ್ರಾಣ ಕಳೆದುಕೊಂಡ ದುರ್ದೈವಿ. ಲಿಂಗರಾಜ್ (35) ತಂದೆಯನ್ನು ಕೊಂದ ಆರೋಪಿ ಪುತ್ರ. ಈತ ಮದುವೆಯಾಗದ (Marriage) ಕಾರಣಕ್ಕೆ ತಂದೆಯ ಮೇಲೆ ಆಗಾಗ ಜಗಳ ಮಾಡುತ್ತಿದ್ದ. ನೆನ್ನೆ ಕುಡಿದ ಮತ್ತಿನಲ್ಲಿ ಮನೆಗೆ ಬಂದು, ಮದುವೆ ವಿಚಾರವಾಗಿ ತಂದೆಯೊಂದಿಗೆ ಗಲಾಟೆ ತೆಗೆದಿದ್ದಾನೆ. ವಾಗ್ವಾದ ವಿಕೋಪಕ್ಕೆ ಹೋದಾಗ ಮನೆಯಲ್ಲಿದ್ದ ಕಬ್ಬಿಣದ ರಾಡ್‌ನಿಂದ ತಂದೆಯ ತಲೆಗೆ ಭೀಕರವಾಗಿ ಹೊಡೆದಿದ್ದಾನೆ. ಗಂಭೀರ ಗಾಯಗೊಂಡ ನಿಂಗಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ನಡೆದ ಸ್ಥಳಕ್ಕೆ ಹೊಸದುರ್ಗ ಪೊಲೀಸ್ ಇನ್ಸ್‌ಪೆಕ್ಟರ್ (PI) ರಮೇಶ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ಎಸಗಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.






