ಬೀದರ್: ಜಿಲ್ಲೆಯ ರಾಜಕೀಯ ಭೀಷ್ಮ ಎಂದೇ ಕರೆಯಲ್ಪಡುವ ಶತಾಯುಷಿ ಹಾಗೂ ಮಾಜಿ ಸಚಿವ ಭೀಮಣ್ಣ ಖಂಡ್ರೆ (Former Minister Bheemanna Khandre) ಅವರ ಆರೋಗ್ಯ ಸ್ಥಿತಿ ಕ್ಷೀಣಿಸಿದೆ. ಕಳೆದ ಎರಡು ವಾರಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಇಂದು ಬೆಳಿಗ್ಗೆ ಭಾಲ್ಕಿಯ ಸ್ವಗೃಹಕ್ಕೆ ಕರೆದೊಯ್ಯಲಾಗಿದೆ.
ಕಳೆದ 16 ದಿನಗಳಿಂದ ಭೀಮಣ್ಣ ಖಂಡ್ರೆ ಅವರು ಗುದಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡುಬರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಅವರನ್ನು ಮನೆಗೆ ಕರೆದುಕೊಂಡು ಹೋಗಲು ನಿರ್ಧರಿಸಿದ್ದಾರೆ.
ಇಂದು ಬೆಳಿಗ್ಗೆ 7 ಗಂಟೆಗೆ ಆಸ್ಪತ್ರೆಯಿಂದ ಭಾಲ್ಕಿ ನಗರದ ಗಾಂಧಿ ವೃತ್ತದ ಹತ್ತಿರವಿರುವ ಅವರ ನಿವಾಸಕ್ಕೆ ಶಿಫ್ಟ್ ಮಾಡಲಾಗಿದೆ. ಸದ್ಯ ಮನೆಯಲ್ಲೇ ವೈದ್ಯರ ತಂಡದ ಮೇಲ್ವಿಚಾರಣೆಯಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರಿಸಲಾಗಿದೆ.
ಜೀವನದ ಕೊನೆಯ ಕ್ಷಣಗಳನ್ನು ಸ್ವಗೃಹದಲ್ಲಿಯೇ ಕಳೆಯಲಿ ಎಂಬ ಉದ್ದೇಶದಿಂದ ಕುಟುಂಬಸ್ಥರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.






