S Shorts

ಹೃದಯಾಘಾತದಿಂದ ಕುಸಿದುಬಿದ್ದ ASI ಸ್ಥಳದಲ್ಲೇ ಸಾವು!

ಹೃದಯಾಘಾತದಿಂದ ಕುಸಿದುಬಿದ್ದ ASI ಸ್ಥಳದಲ್ಲೇ ಸಾವು!
Author: Sagaradventure
Posted By: Sagaradventure
Updated: Nov 2, 2025 | 7:24 AM

ಉಡುಪಿ: ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಎಸ್ಐ ವಿಶ್ವನಾಥ್(58) ಅವರು ಹೃದಯಾಘಾತದಿಂದ ಅಕಾಲಿಕವಾಗಿ ಮೃತಪಟ್ಟಿದ್ದಾರೆ.

ನಿನ್ನೆ ರಾತ್ರಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆಯೇ ಆರೋಗ್ಯದಲ್ಲಿ ತೀವ್ರ ವ್ಯತ್ಯಯ ಉಂಟಾಗಿದ್ದು ಎದೆನೋವು ಕಾಣಿಸಿಕೊಂಡಿತ್ತು. ನೋಡ ನೋಡುತ್ತಲೇ ಕುಸಿದುಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅದಾಗಲೇ ಅವರು ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದ್ದಾರೆ.

ಉಡುಪಿ ಜಿಲ್ಲೆಯ ಹಲವು ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದ ಅನುಭವೀ ಅಧಿಕಾರಿ ವಿಶ್ವನಾಥ್ ಇತ್ತೀಚೆಗಷ್ಟೇ ಮಲ್ಪೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಅವರ ನಿಧನದಿಂದ ಪೊಲೀಸ್ ಇಲಾಖೆಯಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದ್ದು ಹಲವು ಅಧಿಕಾರಿಗಳು ವಿಶ್ವನಾಥ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.