ಬೆಳಗಾವಿ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿಲ್ಲಿಸಲಾಗಿದ್ದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ಅಧಿಕೃತ ಕಾರಿಗೆ ಕಾಂಕ್ರೀಟ್ ಮಿಕ್ಸರ್ ವಾಹನವೊಂದು ಡಿಕ್ಕಿ ಹೊಡೆದ ಘಟನೆ ಬುಧವಾರ ಬೆಳಿಗ್ಗೆ ಸಂಭವಿಸಿದೆ.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯುತ್ತಿರುವ ಕಾಮಗಾರಿಯೊಂದಕ್ಕೆ ಕಾಂಕ್ರೀಟ್ ಪೂರೈಸಲು ಬಂದಿದ್ದ ವಾಹನವನ್ನು ಚಾಲಕ ರಿವರ್ಸ್ ತೆಗೆದುಕೊಳ್ಳುತ್ತಿದ್ದಾಗ, ಆಕಸ್ಮಿಕವಾಗಿ ಈ ಅವಘಡ ನಡೆದಿದೆ. ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಜಿಲ್ಲಾಧಿಕಾರಿಗಳ ಕಾರಿನ ಮುಂಭಾಗ ಜಖಂಗೊಂಡಿದ್ದು, ಕಾರಿನಲ್ಲಿದ್ದ ನಾಮಫಲಕದ ಬೋರ್ಡ್‌ಗೂ ಹಾನಿಯಾಗಿದೆ ಎಂದು ವರದಿಯಾಗಿದೆ.
ಘಟನೆಯು ಕಚೇರಿ ಆವರಣದಲ್ಲಿ ಕೆಲಕಾಲ ಆತಂಕಕ್ಕೆ ಕಾರಣವಾಯಿತು.
