S Shorts

Belagavi | ಕಪಿಲೇಶ್ವರ ದೇವಸ್ಥಾನದ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರ ದಾರುಣ ಸಾ*ವು

Belagavi | ಕಪಿಲೇಶ್ವರ ದೇವಸ್ಥಾನದ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರ ದಾರುಣ ಸಾ*ವು
Author: Sagaradventure
Posted By: Sagaradventure
Updated: May 3, 2026 | 1:08 PM

ಬೆಳಗಾವಿ: ಬೇಸಿಗೆಯ ಬಿಸಿಲಿನ ಬೇಗೆಯಿಂದ ಪಾರಾಗಲು ಈಜಲು ಹೋಗಿದ್ದ ಇಬ್ಬರು ಅಪ್ರಾಪ್ತ ಬಾಲಕರು ನೀರಿನಲ್ಲಿ ಮುಳುಗಿ ಸಾ*ವನ್ನಪ್ಪಿರುವ ದಾರುಣ ಘಟನೆ ಬೆಳಗಾವಿಯಲ್ಲಿ ಭಾನುವಾರ (ಮೇ 3) ಬೆಳಿಗ್ಗೆ ನಡೆದಿದೆ.

ನಗರದ ಪ್ರಸಿದ್ಧ ಕಪಿಲೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ಹೊಂಡದಲ್ಲಿ ಈ ದುರಂತ ಸಂಭವಿಸಿದ್ದು, ಮೃ*ತ ದುರ್ದೈವಿಗಳನ್ನು ಶಿವಾಜಿ ನಗರ ಪ್ರದೇಶದ ನಿವಾಸಿಗಳಾದ ಪರಶುರಾಮ (11) ಮತ್ತು ಶಿವಂ (9) ಎಂದು ಗುರುತಿಸಲಾಗಿದೆ.

ಭಾನುವಾರ ಬೆಳಿಗ್ಗೆ ರಜೆಯ ಮಜಾ ಕಳೆಯಲು ಹಾಗೂ ಬಿಸಿಲಿನ ತಾಪದಿಂದ ಮುಕ್ತಿ ಪಡೆಯಲು ಈ ಬಾಲಕರು ಗುಂಪಾಗಿ ಕಪಿಲೇಶ್ವರ ಹೊಂಡಕ್ಕೆ ಈಜಲು ಬಂದಿದ್ದರು ಎನ್ನಲಾಗಿದೆ. ಆದರೆ, ನೀರಿಗೆ ಇಳಿದ ಬಾಲಕರಿಗೆ ಹೊಂಡದ ಆಳದ ಸ್ಪಷ್ಟ ಅಂದಾಜು ಸಿಗದೆ, ನೀರಿನಲ್ಲಿ ಸಿಲುಕಿ ಪ್ರಾ*ಣ ಕಳೆದುಕೊಂಡಿದ್ದಾರೆ.

ಕಪಿಲೇಶ್ವರ ಹೊಂಡವು ದಶಕಗಳಿಂದ ಸರಿಯಾದ ನಿರ್ವಹಣೆಯಿಲ್ಲದೆ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿದೆ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಂಡದ ಸುತ್ತಲೂ ಯಾವುದೇ ರೀತಿಯ ಸುರಕ್ಷತಾ ಬೇಲಿ (Safety fence) ಅಥವಾ ಅಪಾಯದ ಬಗ್ಗೆ ಎಚ್ಚರಿಕೆ ನೀಡುವ ಫಲಕಗಳಿಲ್ಲದಿರುವುದೇ ಇಂತಹ ಮುಗ್ಧ ಜೀವಗಳ ಬಲಿಗೆ ಕಾರಣವಾಗುತ್ತಿದೆ ಎಂದು ಅವರು ದೂರಿದ್ದಾರೆ.

ವಿಷಯ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಖಡೇಬಜಾರ್ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.