ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ (CM Change) ಕುರಿತು ನಡೆಯುತ್ತಿರುವ ಊಹಾಪೋಹಗಳಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ (Dr. Yathindra Siddaramaiah) ಅವರು ಬೆಳಗಾವಿಯಲ್ಲಿ ಸ್ಪಷ್ಟ ಉತ್ತರ ನೀಡಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಾ. ಯತೀಂದ್ರ ಅವರು, ನಾಯಕತ್ವ ಬದಲಾವಣೆ ಕುರಿತು ಯಾವುದೇ ಗೊಂದಲವಿಲ್ಲ. ರಾಜ್ಯದಲ್ಲಿ ನಾಯಕತ್ವ ವಿಚಾರದಲ್ಲಿ ಯಾವುದೇ ಜಗಳ ಇಲ್ಲ. ಎಲ್ಲವೂ ಸರಿಯಾಗಿದೆ. ನಾಯಕತ್ವ (Leadership) ಬದಲಾವಣೆ ಇಲ್ಲ ಎಂದು ಹೈಕಮಾಂಡ್ (High Command) ಕ್ಲಿಯರ್ ಆಗಿ ಹೇಳಿದೆ ಎಂದು ಹೇಳಿದರು.
ಈ ಮೂಲಕ, ಸಿದ್ದರಾಮಯ್ಯ ಅವರೇ ತಮ್ಮ ಅಧಿಕಾರಾವಧಿಯ ಉಳಿದ ಅವಧಿಗೂ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂಬ ಸಂದೇಶವನ್ನು ಡಾ. ಯತೀಂದ್ರ ಅವರು ಮತ್ತೊಮ್ಮೆ ದೃಢಪಡಿಸಿದ್ದಾರೆ.
