ಬೆಂಗಳೂರು: ರಾಜ್ಯಾದ್ಯಂತ ಬಿಸಿಲಿನ ಪ್ರತಾಪ ಮುಂದುವರಿದಿದ್ದು, ಬೆಂಗಳೂರಿನಲ್ಲಿ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ತಲುಪಲಿದೆ. ಇದರ ನಡುವೆಯೇ, ಹವಾಮಾನ ಇಲಾಖೆಯು ಏಪ್ರಿಲ್ 27 ರಿಂದ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.
Bengaluru may experience severe thunderstorms anytime during 27 April to 5 May. Stay Watchful and Safe
— 🛑 Bengaluru Rain Alert (@Bengalururain) April 21, 2026
ಹವಾಮಾನ ಇಲಾಖೆ, ಏಪ್ರಿಲ್ 27 ರಿಂದ ಮೇ 5 ರವರೆಗೆ ಬೆಂಗಳೂರಿನಲ್ಲಿ ತೀವ್ರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜಾಗರೂಕರಾಗಿರಿ ಮತ್ತು ಸುರಕ್ಷಿತವಾಗಿರಿ ಎಂದು ಮುನ್ಸೂಚನೆ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಜೊತೆಗೆ ಬಲವಾದ ಗಾಳಿ ಬೀಸಲಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಆಕಾಶವು ಮುಖ್ಯವಾಗಿ ಸ್ವಚ್ಛವಾಗಿರಲಿದೆ. ಆದರೆ, ತಾಪಮಾನದಲ್ಲಿ ಗಣನೀಯ ಏರಿಕೆ ಕಂಡುಬರಲಿದೆ. ನಗರದ ಗರಿಷ್ಠ ತಾಪಮಾನವು 36 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದ್ದು, ಇದು ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಿರಲಿದೆ. ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ. ಮಧ್ಯಾಹ್ನದ ವೇಳೆ ಬಿಸಿಲಿನ ಝಳ ಹೆಚ್ಚಿರಲಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.
