S Shorts

ಬೆಂಗಳೂರಿನಲ್ಲಿ ಬಂಧಿತರಾಗಿದ್ದ 31 ಅಕ್ರಮ ಬಾಂಗ್ಲಾ ಪ್ರಜೆಗಳ ಗಡಿಪಾರು

ಬೆಂಗಳೂರಿನಲ್ಲಿ ಬಂಧಿತರಾಗಿದ್ದ 31 ಅಕ್ರಮ ಬಾಂಗ್ಲಾ ಪ್ರಜೆಗಳ ಗಡಿಪಾರು
Author: Sagaradventure
Posted By: Sagaradventure
Updated: Aug 31, 2026 | 11:30 AM

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 31 ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಗಡಿಪಾರು ಮಾಡಿದ್ದಾರೆ. ಮುಂಜಾನೆ 20 ಪೊಲೀಸ್ ಸಿಬ್ಬಂದಿಯ ಬಿಗಿ ಭದ್ರತೆಯಲ್ಲಿ ಈ ಅಕ್ರಮ ವಲಸಿಗರನ್ನು ಪಶ್ಚಿಮ ಬಂಗಾಳದ ಗಡಿಭಾಗಕ್ಕೆ ರೈಲಿನ ಮೂಲಕ ರವಾನಿಸಲಾಗಿದೆ.

ನಗರದ ಒಟ್ಟು 10 ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಇತ್ತೀಚೆಗೆ ಕಾರ್ಯಾಚರಣೆ ನಡೆಸಿ, ವೀಸಾ ಹಾಗೂ ಪಾಸ್‌ಪೋರ್ಟ್ ಇಲ್ಲದೆ ಅಕ್ರಮವಾಗಿ ನೆಲೆಸಿದ್ದ ಈ ಬಾಂಗ್ಲಾ ಪ್ರಜೆಗಳನ್ನು ಬಂಧಿಸಲಾಗಿತ್ತು. ಇದೀಗ ಇವರೆಲ್ಲರನ್ನು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (SMVT) ರೈಲು ನಿಲ್ದಾಣದಿಂದ ಪೊಲೀಸರ ಸರ್ಪಗಾವಲಿನಲ್ಲಿ ಕಳುಹಿಸಿಕೊಡಲಾಗಿದೆ.

ನಾಳೆ ಸಂಜೆ 5 ಗಂಟೆ ಸುಮಾರಿಗೆ ಈ ರೈಲು ಪಶ್ಚಿಮ ಬಂಗಾಳದ ಮಾಲ್ಡಾ (Malda) ತಲುಪಲಿದ್ದು, ಅಲ್ಲಿಂದ ಅವರನ್ನು ಅಧಿಕೃತವಾಗಿ ಬಾಂಗ್ಲಾದೇಶದ ಗಡಿಗೆ ತಲುಪಿಸುವ ಮೂಲಕ ಗಡಿಪಾರು ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುತ್ತದೆ.