ಬೀದರ್ : ಬೀದರ್ ಜಿಲ್ಲಾಧಿಕಾರಿ ಕಚೇರಿಗೆ (District Commissioner Office) ಬಾಂಬ್ ಬೆದರಿಕೆ ಸಂದೇಶ (Bomb Threat Message) ಬಂದಿರುವ ಹಿನ್ನೆಲೆಯಲ್ಲಿ, ಚಿಕ್ಕರ್ಪೇಟ್‌ನಲ್ಲಿರುವ ಕಚೇರಿ ಸುತ್ತಮುತ್ತ ಪೊಲೀಸರು ಹೈ ಅಲರ್ಟ್ (High Alert) ಘೋಷಿಸಿದ್ದಾರೆ.
ಬೆದರಿಕೆ ಸಂದೇಶ ಬಂದ ತಕ್ಷಣ ಕಚೇರಿಯಲ್ಲಿನ ಎಲ್ಲಾ ಸಿಬ್ಬಂದಿಗಳನ್ನು ಹೊರಹಾಕಿ, ಕಟ್ಟಡವನ್ನು ಖಾಲಿ ಮಾಡಲಾಗಿದೆ. ಹಾಗೂ ಸ್ಥಳಕ್ಕೆ ಡಾಗ್ ಸ್ಕ್ವಾಡ್ (Dog Squad), ಅಗ್ನಿಶಾಮಕ ಸಿಬ್ಬಂದಿ (Fire Brigade) ಮತ್ತು ಹೆಚ್ಚಿನ ಸಂಖ್ಯೆಯ ಪೊಲೀಸರು ಧಾವಿಸಿದ್ದಾರೆ.
ಬಾಂಬ್ ನಿಷ್ಕ್ರಿಯ ದಳವು (Bomb Disposal Squad) ಜಿಲ್ಲಾಧಿಕಾರಿ ಕಚೇರಿಯನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸುತ್ತಿದ್ದು, ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಸದ್ಯ ಪೊಲೀಸರು ಬೆದರಿಕೆ ಸಂದೇಶ ಎಲ್ಲಿಂದ ಬಂದಿದೆ ಎಂಬುದರ ಕುರಿತು ತನಿಖೆ ನಡೆಸುತ್ತಿದ್ದು, ಪರಿಶೀಲನೆ ಮುಂದುವರೆದಿದೆ.
