S Shorts

ಹಾಲಿನ ದರ ಬೆನ್ನಲ್ಲೇ ರಾಜ್ಯದ ಜನತೆಗೆ ಮತ್ತೊಂದು ಶಾಕ್: KSRTC, BMTC ಬಸ್ ಟಿಕೆಟ್ ದರ ಏರಿಕೆಗೆ ಸಿದ್ಧತೆ!

ಹಾಲಿನ ದರ ಬೆನ್ನಲ್ಲೇ ರಾಜ್ಯದ ಜನತೆಗೆ ಮತ್ತೊಂದು ಶಾಕ್: KSRTC, BMTC ಬಸ್ ಟಿಕೆಟ್ ದರ ಏರಿಕೆಗೆ ಸಿದ್ಧತೆ!
Author: Sagaradventure
Posted By: Sagaradventure
Updated: Nov 4, 2026 | 10:35 AM

ಬೆಂಗಳೂರು: ಹಾಲಿನ ದರ ಏರಿಕೆಯ ಶಾಕ್‌ನಿಂದ ಹೊರಬರುವ ಮುನ್ನವೇ ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆಯಿದೆ. ಕೆಎಸ್ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯದ 4 ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಪರಿಷ್ಕರಣೆಗೆ ಇಲಾಖೆ ಮುಂದಾಗಿದ್ದು, ಶೀಘ್ರದಲ್ಲೇ ಬಸ್ ಪ್ರಯಾಣಿಕರಿಗೆ ದರ ಏರಿಕೆಯ ಬರೆ ಬೀಳುವ ಲಕ್ಷಣಗಳು ದಟ್ಟವಾಗಿವೆ.

ಈ ಮಹತ್ವದ ಬೆಳವಣಿಗೆಯ ಕುರಿತು ಸಾರಿಗೆ ಸಚಿವ ಭೈರತಿ ಸುರೇಶ್ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದ್ದು, ದರ ಏರಿಕೆಯ ಕುರಿತು ಅಧಿಕೃತ ಘೋಷಣೆಯಾಗುವ ಸಾಧ್ಯತೆಯಿದೆ. 

ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿಗತಿ ಹಾಗೂ ದರ ಪರಿಷ್ಕರಣೆ ಕುರಿತು ಅಧ್ಯಯನ ನಡೆಸಲು ರಚಿಸಲಾಗಿದ್ದ ‘ಅತುಲ್ ತಿವಾರಿ ಸಮಿತಿ’ಯ ವರದಿಯನ್ನು ಆಧರಿಸಿ ಈ ನೂತನ ಪರಿಷ್ಕೃತ ದರ ಜಾರಿಯಾಗಲಿದೆ ಎಂದು ತಿಳಿದುಬಂದಿದೆ.