S Shorts

ಮಾಡಿದ ತಪ್ಪಿಗೆ ಕಾಂಗ್ರೆಸ್ ಕ್ಷಮೆಯಾಚಿಸಿದ ಬಿ.ವೈ.ವಿಜಯೇಂದ್ರ!

ಮಾಡಿದ ತಪ್ಪಿಗೆ ಕಾಂಗ್ರೆಸ್ ಕ್ಷಮೆಯಾಚಿಸಿದ ಬಿ.ವೈ.ವಿಜಯೇಂದ್ರ!
Author: Sagaradventure
Posted By: Sagaradventure
Updated: Nov 3, 2026 | 1:26 PM

ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ವಿವಾದಾತ್ಮಕ ಪದಬಳಕೆ ಮಾಡಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇದೀಗ ತಮ್ಮ ಹೇಳಿಕೆಗೆ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. 

ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ವೇಳೆ, “ಈ ನನ್ನ ಮಕ್ಕಳು ಕಾಂಗ್ರೆಸ್‌ನವರು ಇದ್ದಾರಲ್ಲಾ…” ಎಂದು ಹೇಳಿಕೆ ನೀಡಿದ್ದರು. ಈ ಮಾತು ಭಾರಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಅವರು, “ನಾನು ಉದ್ದೇಶಪೂರ್ವಕವಾಗಿ ಆ ಪದಗಳನ್ನು ಬಳಸಲಿಲ್ಲ, ನನ್ನ ಮಾತಿನಿಂದ ಕಾಂಗ್ರೆಸ್‌ನವರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ” ಎಂದು ಸ್ಪಷ್ಟನೆ ನೀಡುವ ಮೂಲಕ ವಿವಾದಕ್ಕೆ ತೆರೆಎಳೆಯುವ ಪ್ರಯತ್ನ ಮಾಡಿದ್ದಾರೆ.

ವಿಜಯೇಂದ್ರ ಅವರ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಬೀದಿಗಿಳಿದು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಮುಂದುವರಿದ ಭಾಗವಾಗಿ, ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸದ ಕಾಂಪೌಂಡ್‌ಗೆ ವಿಜಯೇಂದ್ರ ವಿರುದ್ಧ ಅವಹೇಳನಕಾರಿ ಪೋಸ್ಟರ್‌ಗಳನ್ನು ಅಂಟಿಸಿ ಆಕ್ರೋಶ ಹೊರಹಾಕಿದ್ದಾರೆ. 

ಬಿಎಸ್‌ವೈ ನಿವಾಸದ ಗೋಡೆಯ ಮೇಲೆ ‘ಹೇಡಿ ವಿಜಯೇಂದ್ರ’, ‘RTGS ಕೇಡಿ’ ಎಂದು ಬರೆಯಲ್ಪಟ್ಟಿರುವ ಪೋಸ್ಟರ್‌ಗಳು ರಾರಾಜಿಸುತ್ತಿದ್ದು, ರಾಜ್ಯ ರಾಜಕೀಯದಲ್ಲಿ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ.