ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ. ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣಾ ಸಮಿತಿ (CWRC) ಮಾಡಿದ್ದ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಎತ್ತಿಹಿಡಿದಿದೆ.
ದೆಹಲಿಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದ್ದು, CWRC ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಪ್ರಾಧಿಕಾರವು ಸೂಚಿಸಿದೆ. ಇದರ ಅನ್ವಯ, ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿನಿತ್ಯ 3,500 ಕ್ಯೂಸೆಕ್ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ CWMA ಸ್ಪಷ್ಟ ಆದೇಶ ನೀಡಿದೆ.
ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಡ್ಯಾಂಗಳಲ್ಲಿ ನೀರಿನ ಮಟ್ಟ ಕುಸಿದಿರುವ ಈ ಸಂದರ್ಭದಲ್ಲಿ ಪ್ರಾಧಿಕಾರದ ಈ ಆದೇಶವು ರಾಜ್ಯ ಸರ್ಕಾರ ಹಾಗೂ ರೈತರಿಗೆ ಬರಸಿಡಿಲಾಗಿ ಪರಿಣಮಿಸಿದೆ.
