S Shorts

ಮಾರಕಾಸ್ತ್ರ ಹಿಡಿದು ರೀಲ್ಸ್ ಹುಚ್ಚು: ಬಿಲ್ಡಪ್ ಕೊಡಲು ಹೋದ ‘ಸಲ್ಮಾನ್ ಖಾನ್’ CCB ಬಲೆಗೆ

ಮಾರಕಾಸ್ತ್ರ ಹಿಡಿದು ರೀಲ್ಸ್ ಹುಚ್ಚು: ಬಿಲ್ಡಪ್ ಕೊಡಲು ಹೋದ ‘ಸಲ್ಮಾನ್ ಖಾನ್’ CCB ಬಲೆಗೆ
Author: Sagaradventure
Posted By: Sagaradventure
Updated: Oct 15, 2026 | 9:39 AM

ಬೆಂಗಳೂರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಡಪ್ ನೀಡಲು ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡುತ್ತಿದ್ದ ಯುವಕನೊಬ್ಬನನ್ನು ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಯನ್ನು ಸಲ್ಮಾನ್ ಖಾನ್ ಎಂದು ಗುರುತಿಸಲಾಗಿದೆ.

ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ಗೃಹಲಕ್ಷ್ಮಿ ಲೇಔಟ್‌ನಲ್ಲಿ ಈತ ಕೈಯಲ್ಲಿ ಉದ್ದನೆಯ ಲಾಂಗ್ ಹಿಡಿದುಕೊಂಡು ವಿಡಿಯೋ ಮಾಡಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆಯೇ ಎಚ್ಚೆತ್ತ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

​ಎರಡು ಲಾಂಗ್ ಹಾಗೂ ಬೈಕ್ ಜಪ್ತಿ

​ಆರೋಪಿ ಸಲ್ಮಾನ್ ಖಾನ್ ಕೇವಲ ಜಾಲತಾಣಗಳಲ್ಲಿ ಬಿಲ್ಡಪ್ ನೀಡುವ ಹಾಗೂ ಜನರಲ್ಲಿ ಭೀತಿ ಹುಟ್ಟಿಸುವ ಉದ್ದೇಶದಿಂದ ಈ ಕೃತ್ಯ ಎಸಗಿದ್ದ. ಆತ ತನ್ನ ದ್ವಿಚಕ್ರ ವಾಹನದಲ್ಲೇ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ಓಡಾಡುತ್ತಿದ್ದ ಎಂಬ ವಿಚಾರ ಕಾರ್ಯಾಚರಣೆ ವೇಳೆ ಬೆಳಕಿಗೆ ಬಂದಿದೆ. ಬಂಧಿತನಿಂದ ಎರಡು ಮಾರಕಾಸ್ತ್ರಗಳನ್ನು (ಲಾಂಗ್) ವಶಪಡಿಸಿಕೊಂಡಿರುವ ಪೊಲೀಸರು, ಕೃತ್ಯಕ್ಕೆ ಬಳಸಿದ್ದ ಆತನ ದ್ವಿಚಕ್ರ ವಾಹನವನ್ನು ಸಹ ಜಪ್ತಿ ಮಾಡಿದ್ದಾರೆ.

​ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲು

​ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಪ್ರದರ್ಶಿಸಿ ಸಾರ್ವಜನಿಕ ನೆಮ್ಮದಿಗೆ ಭಂಗ ತಂದಿರುವ ಆರೋಪಿ ಸಲ್ಮಾನ್ ಖಾನ್ ವಿರುದ್ಧ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆ (Arms Act) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸದ್ಯ ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.