ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ (ಎಂ.ಎಲ್.ಸಿ) ಸದಸ್ಯರಾಗಿ ಆಯ್ಕೆಯಾಗಿದ್ದ ಎಂ.ಕೆ. ಪ್ರಾಣೇಶ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರಿ ಹಿನ್ನಡೆಯಾಗಿದೆ. ಅವರ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಇದೀಗ ಪ್ರಾಣೇಶ್ ಅವರ ಸದಸ್ಯತ್ವವನ್ನು ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದೆ.
ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆದಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಎಂ.ಕೆ. ಪ್ರಾಣೇಶ್ ಅವರು ತಮ್ಮ ಪ್ರತಿಸ್ಪರ್ಧಿ ಗಾಯತ್ರಿ ಶಾಂತೇಗೌಡ ಅವರ ವಿರುದ್ಧ ಕೇವಲ 6 ಮತಗಳ ಅಲ್ಪ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಗೆಲುವನ್ನು ಪ್ರಶ್ನಿಸಿ ಪರಾಜಿತ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ನೀಡಿ, ಅವರು ಮತ ಚಲಾಯಿಸಿರುವುದನ್ನು ಗಾಯತ್ರಿ ಅವರು ನ್ಯಾಯಾಲಯದಲ್ಲಿ ಪ್ರಬಲವಾಗಿ ಪ್ರಶ್ನಿಸಿದ್ದರು.
ಕುರಿತು ಸುದೀರ್ಘ ಕಾಲ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಅಂತಿಮವಾಗಿ ಎಂ.ಕೆ. ಪ್ರಾಣೇಶ್ ಅವರ ಸದಸ್ಯತ್ವವನ್ನು ರದ್ದುಪಡಿಸಿ ತೀರ್ಪು ಪ್ರಕಟಿಸಿದೆ. ಈ ಐತಿಹಾಸಿಕ ತೀರ್ಪಿನ ಅನ್ವಯ, ಪರಾಜಿತ ಅಭ್ಯರ್ಥಿಯಾಗಿದ್ದ ಗಾಯತ್ರಿ ಶಾಂತೇಗೌಡ ಅವರು ಬಾಕಿ ಉಳಿದಿರುವ ಮುಂದಿನ ಒಂದೂವರೆ (1.5) ವರ್ಷಗಳ ಕಾಲ ವಿಧಾನ ಪರಿಷತ್ ಸದಸ್ಯರಾಗಿ (ಎಂ.ಎಲ್.ಸಿ) ಅಧಿಕಾರ ಸ್ವೀಕರಿಸಿ ಕಾರ್ಯನಿರ್ವಹಿಸಲಿದ್ದಾರೆ.
