S Shorts

BREAKING: CM ಅಂಗಳಕ್ಕೆ IPS ಅಧಿಕಾರಿಯ ‘ರಾಸಲೀಲೆ’ ವಿಡಿಯೋ; ಸಿದ್ದರಾಮಯ್ಯ ಕೆಂಡಾಮಂಡಲ!

BREAKING: CM ಅಂಗಳಕ್ಕೆ IPS ಅಧಿಕಾರಿಯ ‘ರಾಸಲೀಲೆ’ ವಿಡಿಯೋ; ಸಿದ್ದರಾಮಯ್ಯ ಕೆಂಡಾಮಂಡಲ!
Author: Devaraj Naik
Posted By: Devaraj Naik
Updated: Jan 19, 2026 | 9:16 AM

ಬೆಂಗಳೂರು: ರಾಜ್ಯ ಪೊಲೀಸ್ ವಲಯದಲ್ಲಿ ಸಂಚಲನ ಮೂಡಿಸಿರುವ ಐಪಿಎಸ್‌ ಅಧಿಕಾರಿಯವರದ್ದು ಎನ್ನಲಾದ ‘ರಾಸಲೀಲೆ’ ವಿಡಿಯೋ ಪ್ರಕರಣ ಈಗ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಂಗಳ ತಲುಪಿದೆ. ವಿಡಿಯೋ ಕುರಿತು ಮಾಹಿತಿ ಪಡೆದಿರುವ ಮುಖ್ಯಮಂತ್ರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಉನ್ನತ ಪೊಲೀಸ್ ಅಧಿಕಾರಿಯೊಬ್ಬರ ಇಂತಹ ವರ್ತನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ನೀಡುವಂತೆ ಗೃಹ ಇಲಾಖೆ ಮತ್ತು ಹಿರಿಯ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

ಕರ್ತವ್ಯ ಲೋಪ ಹಾಗೂ ನೈತಿಕ ಅಧಃಪತನವನ್ನು ಸಹಿಸುವುದಿಲ್ಲ ಎಂಬ ಸಂದೇಶ ನೀಡಿರುವ ಸಿಎಂ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವ ಸಾಧ್ಯತೆ ಇದೆ. ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ವಿಡಿಯೋ ವೈರಲ್ ಆಗಿರುವುದು ಇಡೀ ಇಲಾಖೆಗೆ ಮುಜುಗರ ತಂದಿದೆ ಎಂಬ ಚರ್ಚೆಗಳು ಆರಂಭವಾಗಿವೆ.

ಈ ಪ್ರಕರಣವು ರಾಜ್ಯ ರಾಜಕೀಯದಲ್ಲೂ ದೊಡ್ಡ ಮಟ್ಟದ ಸದ್ದು ಮಾಡುವ ಲಕ್ಷಣಗಳು ಕಾಣಿಸುತ್ತಿದ್ದು, ವಿರೋಧ ಪಕ್ಷಗಳು ಈ ಬಗ್ಗೆ ಹೇಗೆ ಪ್ರತಿಕ್ರಿಯಿಸುತ್ತವೆ ಎಂಬುದು ಕುತೂಹಲ ಮೂಡಿಸಿದೆ.