S Shorts

ಇಂದು Dakshina Kannada ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಇಂದು Dakshina Kannada ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
Author: Meghana Gowda
Posted By: Meghana Gowda
Updated: Dec 3, 2025 | 3:30 AM

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಂಗಳೂರಿನ ಹೆಚ್‌ಎಎಲ್ (HAL) ವಿಮಾನ ನಿಲ್ದಾಣದಿಂದ ಬೆಳಗ್ಗೆ 11 ಗಂಟೆಗೆ ಮಂಗಳೂರಿಗೆ ಪ್ರಯಾಣ ಬೆಳೆಸಲಿರುವ ಸಿಎಂ, ದಿನವಿಡೀ ವಿವಿಧ ಮಹತ್ವದ ಕಾರ್ಯಕ್ರಮಗಳು ಮತ್ತು ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

11:40ಕ್ಕೆ ಕೊಣಾಜೆ ಮಂಗಳಗಂಗೋತ್ರಿಯಲ್ಲಿ ಶಿವಗಿರಿ ಮಠ ವರ್ಕಲಾ ಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಆಯೋಜಿಸಿರುವ ನಾರಾಯಣಗುರು ಮತ್ತು ಮಹಾತ್ಮಗಾಂಧಿ (Narayana Guru and Mahatma Gandhi)ಅವರ ಐತಿಹಾಸಿಕ ಸಂವಾದದ ಶತಮಾನೋತ್ಸವ, ಗುರುವಿನ ಮಹಾಸಮಾಧಿ ಶತಾಬ್ಧಿ ಸರ್ವಮತ ಸಮ್ಮೇಳನದ ಶತಮಾನೋತ್ಸವ, ಮತ್ತು ಯತಿ ಪೂಜೆ ಉದ್ಘಾಟನಾ ಸಮಾರಂಭಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 1ಕ್ಕೆ ಪೇಸ್ (PACE) ಮತ್ತು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (AI) ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜೊತೆಗೆ, ಪೇಸ್ ಟೈಡ್ ಪಾರ್ಕ್ (PACE TIDE Park) ಮತ್ತು ಪೇಸ್ ಕೇರ್ಸ್ ಸಮುದಾಯ ಸೇವಾ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.

ಮಧ್ಯಾಹ್ನನದನಂತರ ಸರ್ಕಿಟ್ ಹೌಸ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ವಕೀಲರ ಬಾರ್ ಅಸೋಸಿಯೇಷನ್‌ (Bar Association) ಪ್ರತಿನಿಧಿಗಳನ್ನ ಭೇಟಿ ಮಾಡಿ, ಜಿಲ್ಲೆಯ ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಸಂಜೆ ಕಾರ್ಯಕ್ರಮಗಳನ್ನು ಮುಗಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ ಎಂದು ತಿಳಿಸಿದ್ದಾರೆ.