S Shorts

ಮಗುವಿಗೆ ನಾಮಕರಣ ಮಾಡಿದ DK ಶಿವಕುಮಾರ್!!

ಮಗುವಿಗೆ ನಾಮಕರಣ ಮಾಡಿದ DK ಶಿವಕುಮಾರ್!!
Author: Sagaradventure
Posted By: Sagaradventure
Updated: Oct 31, 2025 | 3:38 PM

ಬೆಂಗಳೂರು: ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣನವರ್ ಅವರ ಮಗನಿಗೆ “ಶಿವಕುಮಾರ್” ಎಂಬ ಹೆಸರು ಇಡುವ ಭಾಗ್ಯ ಇಂದು ನನ್ನದಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಖುಷಿ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಹಂಚಿಕೊಂಡಿರುವ ಅವರು, “ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ!”. “ನನ್ನ ಹೆಸರನ್ನು ಮಗುವಿಗೆ ಇಡಲು ನಿರ್ಧರಿಸಿದ ಶಾಸಕರ ಈ ನಡೆಗೆ ನಾನು ಧನ್ಯನಾಗಿದ್ದೇನೆ,” ಎಂದು ತಿಳಿಸಿದ್ದಾರೆ.

ಮಗುವಿಗೆ ಆಶೀರ್ವಾದ ನೀಡಿದ ಅವರು, “ಮುಂದಿನ ದಿನಗಳಲ್ಲಿ ಈ ಮುದ್ದಾದ ಮಗು ನನಗಿಂತಲೂ ಎತ್ತರಕ್ಕೆ ಬೆಳೆಯಲಿ, ತಂದೆ-ತಾಯಿಗಳಿಗೆ ಒಳ್ಳೆಯ ಹೆಸರು ತರುವಂತಾಗಲಿ” ಎಂದು ಶುಭಹಾರೈಸಿದರು.

ಕನ್ನಡ ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ, ಈ “ಶಿವಕುಮಾರ್” ಕರುನಾಡ ಬೆಳಗುವ ಕುವರನಾಗಲಿ ಎಂದು ಮನತುಂಬಿ ಹಾರೈಸಿದ್ದಾರೆ.