S Shorts

Gavisiddheshwara Jatra | ಅಜ್ಜಯ್ಯನ ಜಾತ್ರೆಗೆ ಹರಿದು ಬಂದ ಜನಸಾಗರ; ಇಂದು ಸಂಜೆ 5:30ಕ್ಕೆ ಗವಿಸಿದ್ದೇಶ್ವರ ರಥೋತ್ಸವ!

Gavisiddheshwara Jatra |  ಅಜ್ಜಯ್ಯನ ಜಾತ್ರೆಗೆ ಹರಿದು ಬಂದ ಜನಸಾಗರ; ಇಂದು ಸಂಜೆ 5:30ಕ್ಕೆ ಗವಿಸಿದ್ದೇಶ್ವರ ರಥೋತ್ಸವ!
Author: Meghana Gowda
Posted By: Meghana Gowda
Updated: Jan 5, 2026 | 5:25 AM

ಕೊಪ್ಪಳ: ನಾಡಿನ ಜನರ ಆರಾಧ್ಯ ದೈವ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳ ನೇತೃತ್ವದಲ್ಲಿ ಇಂದು (ಜ.05) ಕೊಪ್ಪಳದಲ್ಲಿ ಐತಿಹಾಸಿಕ ಗವಿಸಿದ್ದೇಶ್ವರ ಜಾತ್ರಾ ಮಹಾರಥೋತ್ಸವ (Rathotsava) ನಡೆಯಲಿದೆ. ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಂಜೆ 5:30ಕ್ಕೆ ಅದ್ಧೂರಿ ರಥೋತ್ಸವ ಜರುಗಲಿದೆ.

ಮೇಘಾಲಯ ರಾಜ್ಯಪಾಲರಾದ ಸಿ.ಹೆಚ್. ವಿಜಯಶಂಕರ್ (Meghalaya Governor Vijay Shankar ) (ಮೂಲತಃ ಕೊಪ್ಪಳದ ಕುಕನೂರು ಗ್ರಾಮದವರು) ಅವರು ಇಂದು ರಥೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ರಥೋತ್ಸವದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಕರ್ತೃ ಗದ್ದುಗೆಯ ಗವಿಸಿದ್ದೇಶ್ವರನಿಗೆ ವಿಶೇಷ ಪೂಜೆ ಹಾಗೂ ಅಭಿಷೇಕಗಳನ್ನು ನೆರವೇರಿಸಲಾಗಿದೆ. ಮಧ್ಯರಾತ್ರಿಯಿಂದಲೇ ಸಾವಿರಾರು ಭಕ್ತರು ಕಾಲ್ನಡಿಗೆಯ ಮೂಲಕ ಕೊಪ್ಪಳಕ್ಕೆ ಆಗಮಿಸಿ ಮಹಿಳೆಯರು ಮತ್ತು ಮಕ್ಕಳು ಭಕ್ತಿಯಿಂದ ದೀಡ್ ನಮಸ್ಕಾರ ಹಾಕಿ ಹರಕೆ ತೀರಿಸುತ್ತಿದ್ದಾರೆ.

ಲಕ್ಷಾಂತರ ಭಕ್ತರಿಗಾಗಿ ದಾಸೋಹದ ವ್ಯವಸ್ಥೆ ಮಾಡಲಾಗಿದ್ದು, ಜಾತ್ರಾ ಮೈದಾನವಿಡೀ ಭಕ್ತರಿಂದ ತುಂಬಿ ತುಳುಕುತ್ತಿದೆ.