ಹಾವೇರಿ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ ನೀಡಿದ ಗಂಭೀರ ಆರೋಪದ (Serious Allegation) ಹಿನ್ನೆಲೆಯಲ್ಲಿ, ಆಕ್ರೋಶಗೊಂಡ ಪೋಷಕರು ಮತ್ತು ಸಾರ್ವಜನಿಕರು ಶಿಕ್ಷಕನಿಗೆ ಧರ್ಮದೇಟು ನೀಡಿದ್ದಾರೆ. ಹಾಗೂ ಆತನಿಗೆ ಚಪ್ಪಲಿ ಹಾರ ಹಾಕಿ ಪೊಲೀಸ್ ಠಾಣೆಗೆ (Police Station) ಮೆರವಣಿಗೆಯಲ್ಲಿ ಕರೆದುಕೊಂಡು ಬಂದಿರುವ ಘಟನೆ ಬೆಳಕಿಗೆ ಬಂದಿದೆ.
ಸವಣೂರು ಪಟ್ಟಣದ ಸರ್ಕಾರಿ ಉರ್ದು ಉನ್ನತೀಕರಿಸಿದ ಶಾಲೆಯ (Government Urdu Higher Primary School) ಶಿಕ್ಷಕ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಲಾಗಿದೆ.
ಈ ವಿಚಾರ ತಿಳಿದ ಕೂಡಲೇ ಆಕ್ರೋಶಗೊಂಡ ಪೋಷಕರು ಮತ್ತು ಸ್ಥಳೀಯರು ಶಾಲೆಗೆ ನುಗ್ಗಿದ್ದಾರೆ. ಅಲ್ಲಿ ಶಿಕ್ಷಕನನ್ನು ಹಿಡಿದು, ಆತನಿಗೆ ಧರ್ಮದೇಟು (Public Thrashing) ನೀಡಿದ್ದಾರೆ. ನಂತರ ಶಿಕ್ಷಕನ ಕೊರಳಿಗೆ ಚಪ್ಪಲಿ ಹಾರ (Slipper Garland) ಹಾಕಿ, ಆತನನ್ನು ರಸ್ತೆ ಮೂಲಕವೇ ಸವಣೂರು ಪೊಲೀಸ್ ಠಾಣೆಯವರೆಗೆ ಮೆರವಣಿಗೆ ಮಾಡಿಕೊಂಡು ಬಂದಿದ್ದಾರೆ.
ಸವಣೂರು ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
