S Shorts

ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಕೇಂದ್ರ ಸಚಿವ ಕುಮಾರಸ್ವಾಮಿ; ಕ್ರಮಕ್ಕೆ ಒತ್ತಾಯ

ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಕೇಂದ್ರ ಸಚಿವ ಕುಮಾರಸ್ವಾಮಿ; ಕ್ರಮಕ್ಕೆ ಒತ್ತಾಯ
Author: StateNews Desk
Posted By: StateNews Desk
Updated: Nov 1, 2025 | 3:19 PM

ಬೆಂಗಳೂರು: ಕನ್ನಡ ರಾಜ್ಯೋತ್ಸವದ ದಿನವಾದ ಇಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರವೊಂದನ್ನು ಬರೆದು, ಕ್ರಮಕ್ಕೆ ಕೋರಿದ್ದಾರೆ.

ʼಕಳೆದ 4-5 ವರ್ಷಗಳಿಂದ ಸಾರ್ವಜನಿಕ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳ ಸಗಟು ಖರೀದಿ ಆಗಿಲ್ಲ ಎಂಬ ಬಗ್ಗೆ ನನಗೆ ಮಾಧ್ಯಮಗಳ ಮೂಲಕ ತಿಳಿಯಿತು ಹಾಗೂ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಪ್ನ ಪುಸ್ತಕ ಮಳಿಗೆಯಲ್ಲಿ ನಡೆದ ಪುಸ್ತಕ ಜಾತ್ರೆಯಲ್ಲಿ ಪಾಲ್ಗೊಂಡಿದ್ದ ಅನೇಕ ಪ್ರಕಾಶಕರು ಈ ವಿಷಯದ ಬಗ್ಗೆ ನನ್ನ ಗಮನ ಸೆಳೆದಿದ್ದಾರೆʼ ಎಂದು ಅವರು ತಿಳಿಸಿದ್ದಾರೆ.

Image

ʼನಾಡಿನಲ್ಲಿ ಓದುವ ಸಂಸ್ಕೃತಿ ಬೆಳೆಯಬೇಕು. ಯುವ ಜನರು ಮೊಬೈಲ್ ನಲ್ಲಿ ಕಳೆದುಹೋಗುವ ಬದಲು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಓದಿನ ಸಂಸ್ಕೃತಿಯನ್ನು ಉತ್ತೇಜಿಸುವ ಕೆಲಸವನ್ನು ನಾವು ನೀವೆಲ್ಲರೂ ಸೇರಿ ಮಾಡಬೇಕಿದೆ. ವಿಪುಲವಾಗಿ ಬೆಳೆದಿರುವ ಕನ್ನಡ ಸಾಹಿತ್ಯವನ್ನು ಮಾತೃಪ್ರೀತಿಯಿಂದ ನೋಡಬೇಕಾದದ್ದು ನಮ್ಮೆಲ್ಲರ ಕರ್ತವ್ಯ. ಸಾಮಾನ್ಯರು ಓದುವ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಭಾಷಾಭಿಮಾನ ಬೆಳೆಸುವ, ಸಾಹಿತ್ಯಾಸಕ್ತಿ ಸೃಷ್ಟಿಸುವ ಕೆಲಸ ಆಗಬೇಕಿದೆ. ಪುಸ್ತಕ ಸಂಸ್ಕೃತಿ ಬೆಳೆದಷ್ಟು ಭಾಷೆ ಸದೃಢವಾಗಿ ಬೆಳೆಯುತ್ತದೆ. ಈ ಹಿನ್ನೆಲೆಯಲ್ಲಿ ತಾವು ತುರ್ತು ಕ್ರಮ ಕೈಗೊಂಡು ಕನ್ನಡ ಪುಸ್ತಕಗಳ ಸಗಟು ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಕೋರುತ್ತೇನೆʼ ಎಂದು ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.