ಕಾರವಾರ: ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಮಾಹಿತಿಯಂತೆ ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು, ಸಾರ್ವಜನಿಕರು ಈ ಕೆಳಗಿನ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ರಾಜ್ಯದ ಕರಾವಳಿಯಲ್ಲಿಇಂದಿನಿಂದ ಎರಡು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ. ಉತ್ತರ ಕನ್ನಡ, ಉಡುಪಿ , ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಏ.10 ರಿಂದ 12 ರ ವರೆಗೆ ಬಿಸಿಗಾಳಿ ಬೀಸುವ ಸೂಚನೆ ನೀಡಿದ್ದು, ಅಧಿಕ ಉಷ್ಣಾಂಶ ದಾಖಲಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಅರಬ್ಬಿ ಸಮುದ್ರ ಪ್ರಕ್ಷುಬ್ದವಾಗಿದ್ದು ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಇದಲ್ಲದೇ ಅಧಿಕ ಗಾಳಿ ಒತ್ತಡದಿಂದಾಗಿ ಕಾರವಾರ ಸೇರಿದಂತೆ ಕರಾವಳಿ ಮೀನುಗಾರರು ಮೀನುಗಾರಿಕೆ ಬಂದ್ ಮಾಡಿದ್ದಾರೆ.
