S Shorts

ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಭಾರಿ ಮಳೆ
Author: Savina Naik
Posted By: Savina Naik
Updated: Apr 29, 2026 | 5:56 PM

ಬೆಂಗಳೂರು: ಬೆಂಗಳೂರಿನಲ್ಲಿ ಸಂಜೆ ಆಗುತ್ತಿದ್ದಂತೆ ಗಾಳಿ, ಗುಡುಗು ಸಮೇತ ಧಾರಾಕಾರ ಮಳೆ ಸುರಿದಿದೆ.

ದಿಢೀರ್ ಭಾರಿ ಗಾಳಿ, ಗುಡುಗು ಸಹಿತ ಸುರಿದ ಮಳೆರಾಯನ ಆರ್ಭಟಕ್ಕೆ ಸಿಟಿ ಮಂದಿ ಬೆಚ್ಚಿಬಿದ್ದಿದ್ದಾರೆ. ಜನರು ಸೇರಿದಂತೆ ವಾಹನ ಸವಾರರು ಪರದಾಡುವಂತಾಗಿದೆ.

ಮೆಜೆಸ್ಟಿಕ್, ಮಾರುಕಟ್ಟೆ (ಮಾರ್ಕೆಟ್), ಶಾಂತಿನಗರ, ರಿಚ್ಮಂಡ್ ಸರ್ಕಲ್, ಕೋರಮಂಗಲ, ಮಲ್ಲೇಶ್ವರಂ, ಶಿವಾನಂದ ಸರ್ಕಲ್, ಗುಟ್ಟಹಳ್ಳಿ, ವಸಂತನಗರ, ಶಾಂತಿನಗರ, ಆರ್.ಟಿ.ನಗರ, ಜಯನಗರ, ಜೆ.ಪಿ‌ ನಗರ, ಹೆಬ್ಬಾಳ, ಶಿವಾಜಿ ನಗರ, ಬನಶಂಕರಿ, ಸದಾಶಿವನಗರ, ವಿಲ್ಸನ್ ಗಾರ್ಡನ್, ಲಾಲ್ ಬಾಗ್, ಡಬಲ್ ರೋಡ್, ರಿಚ್ಮಂಡ್ ಸರ್ಕಲ್ ಮತ್ತು ವಿಧಾನಸೌಧದ ಸುತ್ತಮುತ್ತ ವರುಣ ಆರ್ಭಟಿಸುತ್ತಿದೆ.

ಧಾರಾಕಾರ ಮಳೆಗೆ ಕೆಲವೆಡೆ ಬೃಹತ್​ ಮರಗಳು ಧರೆಗುರುಳಿವೆ. ಮರ ಬಿದ್ದು ಶೇಷಾದ್ರಿಪುರಂ-ಮಲ್ಲೇಶ್ವರಂ ರಸ್ತೆ ಬಂದ್ ಆಗಿದೆ. ಗೊರಗುಂಟೆಪಾಳ್ಯದಲ್ಲಿ ಭಾರಿ ಗಾಳಿ ಮಳೆಯಿಂದಾಗಿ ಮರ ಬಿದ್ದ ಹಿನ್ನೆಲೆ ರಸ್ತೆ ಬದಿ ನಿಲ್ಲಿಸಿದ್ದ ಕಾರು ಜಖಂಗೊಂಡಿದೆ.