ಬೆಂಗಳೂರು: ಬೆಂಗಳೂರು ಸೇರಿದಂತೆ ಇಂದು ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದೆಲ್ಲೆಡೆ ಮುಂದಿನ ನಾಲ್ಕು ದಿನ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕರ್ನಾಟಕ ಮೇಲೆ ಮುಂದಿನ ವಾರ ಒಂದು ಭೀಕರ ಮಾರುತದ ಅಲೆ ಅಪ್ಪಳಿಸಲಿದ್ದು, ಭಾರತ ಹವಾಮಾನ ಇಲಾಖೆ (IMD) ಮೇ 5 ರಿಂದ 9ರ ತನಕ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಗಂಭೀರ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಎರಡರಲ್ಲೂ ನಾಳೆಯಿಂದ ಐದು ದಿನ ಸತತ ಹಗುರ ರಿಂದ ಮಧ್ಯಮ ಮಳೆ, ಗುಡುಗು-ಮಿಂಚು ಮತ್ತು 30-40 ಕಿ.ಮೀ ವೇಗದ ಚಂಡಮಾರುತ ಇರಲಿದೆ.
ಸೋಮವಾರ ಸುರಿದ ಮಳೆಗೆ ಮೈಸೂರಿನಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು, ವಾಹನ ಸಂಚಾರದಲ್ಲಿ ಅಡೆತಡೆಗಳು ಉಂಟಾಗಿವೆ. ಇನ್ನೂ ಮೂರು ದಿನ ರಾಜ್ಯದಲ್ಲಿ ವರುಣಾರ್ಭಟವಿರಲಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ 30-40 ಕಿ. ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಜೋರು ಮಳೆಯಾಗಲಿದೆ.
ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆಯಿರಲಿದೆ. ಉತ್ತರ ಕರ್ನಾಟಕದ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದ್ದು, ಉಳಿದೆಡೆ ಶುಷ್ಕ ವಾತಾವರಣವಿರಲಿದೆ.
