S Shorts

Breaking: ಹೊನ್ನಾವರ ಬಳಿ ಭೀಕರ ಅಪಘಾತ; 15ಕ್ಕೂ ಹೆಚ್ಚು ಮಂದಿಗೆ ಗಾಯ

Breaking: ಹೊನ್ನಾವರ ಬಳಿ ಭೀಕರ ಅಪಘಾತ; 15ಕ್ಕೂ ಹೆಚ್ಚು ಮಂದಿಗೆ ಗಾಯ
Author: Rashmi Yadav
Posted By: Rashmi Yadav
Updated: Nov 1, 2025 | 3:42 PM

ಹೊನ್ನಾವರ (ಉತ್ತರ ಕನ್ನಡ): ಬೆಂಗಳೂರಿನಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸಾರಿಗೆ ಬಸ್ ಮತ್ತು ಕಾರಿನ ನಡುವೆ ತಾಲೂಕಿನ ಗೇರುಸೊಪ್ಪ ಸೂಳೆಮೂರ್ಕಿ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದೆ.

ಪರಿಣಾಮ, ಬ‌ಸ್ ನಲ್ಲಿ ಪ್ರಯಾಣಿಸುತ್ತಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಕಾರಿನಲ್ಲಿದ್ದವರಿಗೂ ತೀವ್ರ ಗಾಯಗಳಾಗಿವೆ. ಅಪಘಾತದ ತೀವ್ರತೆಗೆ ಬಸ್ ಸಂಪೂರ್ಣವಾಗಿ ಕಂದಕದಲ್ಲಿ ಸಿಲುಕಿಕೊಂಡಿದೆ.

ಸ್ಥಳೀಯರು ಮತ್ತು ಪೊಲೀಸರ ಸಹಕಾರದೊಂದಿಗೆ ಗಾಯಗೊಂಡವರನ್ನು ತಕ್ಷಣವೇ ಐದಕ್ಕೂ ಹೆಚ್ಚು ಆಂಬುಲೆನ್ಸ್‌ಗಳ ಮೂಲಕ ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗುತ್ತಿದೆ. ಬಸ್‌ನೊಳಗೆ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಹೊರತೆಗೆಯಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಮಾಡುತ್ತಿದ್ದಾರೆ.

ಸಂಚಾರಕ್ಕೆ ಅಡ್ಡಿ: ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಸದ್ಯ ಘಟನಾ ಸ್ಥಳದಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಇರುವುದರಿಂದ, ಅಪಘಾತದ ನಿಖರ ಕಾರಣ ಮತ್ತು ಗಾಯಾಳುಗಳ ಸಂಪೂರ್ಣ ವಿವರ ಇನ್ನಷ್ಟೇ ತಿಳಿದುಬರಬೇಕಿದೆ ಎಂದು ಹೊನ್ನಾವರ ಪೊಲೀಸರು ತಿಳಿಸಿದ್ದಾರೆ.