S Shorts

IPL 2026 | ಸ್ಟೇಡಿಯಂ ಸುತ್ತಮುತ್ತ ಪಾರ್ಕಿಂಗ್ ಮಾಡಿದರೆ ಬೀಳುತ್ತೆ ದಂಡ! ಟ್ರಾಫಿಕ್ ಬದಲಾವಣೆಗಳ ಪೂರ್ಣ ಮಾಹಿತಿ ಇಲ್ಲಿದೆ

IPL 2026 | ಸ್ಟೇಡಿಯಂ ಸುತ್ತಮುತ್ತ ಪಾರ್ಕಿಂಗ್ ಮಾಡಿದರೆ ಬೀಳುತ್ತೆ ದಂಡ! ಟ್ರಾಫಿಕ್ ಬದಲಾವಣೆಗಳ ಪೂರ್ಣ ಮಾಹಿತಿ ಇಲ್ಲಿದೆ
Author: Meghana Gowda
Posted By: Meghana Gowda
Updated: Mar 28, 2026 | 10:43 AM

ಬೆಂಗಳೂರು: ಐಪಿಎಲ್ 2026ರ ಬಹುನಿರೀಕ್ಷಿತ ಪಂದ್ಯಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಹಣಾಹಣಿ ಇಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜರುಗಲಿದೆ. ಪಂದ್ಯದ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು, ವಾಹನ ಸಂಚಾರದಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ.

ಎಲ್ಲೆಲ್ಲಿ ವಾಹನ ನಿಲುಗಡೆ (Parking) ನಿಷೇಧ?

ಇಂದು ಮಧ್ಯಾಹ್ನದಿಂದಲೇ ಕ್ರೀಡಾಂಗಣದ ಸುತ್ತಮುತ್ತಲಿನ ಪ್ರಮುಖ ರಸ್ತೆಗಳಾದ ಕ್ವೀನ್ಸ್ ರಸ್ತೆ, ಎಂ.ಜಿ ರಸ್ತೆ (ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ), ಕಬ್ಬನ್ ರಸ್ತೆ, ರಾಜಭವನ ರಸ್ತೆ ಮತ್ತು ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ, ಲಾವೆಲ್ಲೆ ರಸ್ತೆ, ವಿಠಲ್ ಮಲ್ಯ ರಸ್ತೆ ಮತ್ತು ನೃಪತುಂಗ ರಸ್ತೆಗಳಲ್ಲಿ ಮತ್ತು  ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಹಾಗೂ ಬಾಲಭವನ ಮುಂಭಾಗದ ರಸ್ತೆಗಳಲ್ಲಿ ವಾಹನ ನಿಲುಗಡೆಗೆ ಅವಕಾಶವಿಲ್ಲ. ವಾಹನ ಪಾರ್ಕಿಂಗ್ ಅನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ವಾಹನ ನಿಲುಗಡೆಗೆ ಎಲ್ಲೆಲ್ಲಿ ಅವಕಾಶವಿದೆ?

ಪಂದ್ಯ ವೀಕ್ಷಣೆಗೆ ಬರುವ ಸಾರ್ವಜನಿಕರು ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ, ಸೇಂಟ್ ಜೋಸೆಫ್ ಯುರೋಪಿಯನ್ ಸ್ಕೂಲ್ ಮೈದಾನ (ಮ್ಯೂಸಿಯಂ ರಸ್ತೆ), ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೊದಲ ಮಹಡಿ, ಯುಬಿ ಸಿಟಿ ಪಾರ್ಕಿಂಗ್ ಹಾಗೂ ಗರುಡ ಮಾಲ್ ಮತ್ತು ಫ್ರೀಡಂ ಪಾರ್ಕ್ ಮಲ್ಟಿ ಲೆವೆಲ್ ಪಾರ್ಕಿಂಗ್ ಸ್ಥಳಗಳಲ್ಲಿ ತಮ್ಮ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ

ಸ್ಟೇಡಿಯಂ ಪ್ರವೇಶ ಮತ್ತು ನಿರ್ಗಮನದ ಮಾಹಿತಿ:

 ಕಬ್ಬನ್ ರಸ್ತೆಯ ಕಡೆಯಿಂದ ಬರುವ ಸಾರ್ವಜನಿಕರು ಗೇಟ್ ಸಂಖ್ಯೆ E-1 ರಿಂದ E-3 ಹಾಗೂ E-18, E-19, E-22 ಮತ್ತು E-23 ರ ಮೂಲಕ ಕ್ರೀಡಾಂಗಣ ಪ್ರವೇಶಿಸಬಹುದು. ದಟ್ಟಣೆ ತಪ್ಪಿಸಲು ಸಾರ್ವಜನಿಕರು ಮೆಟ್ರೋ ಅಥವಾ ಸಾರ್ವಜನಿಕ ಸಾರಿಗೆಯನ್ನು ಬಳಸಲು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.