S Shorts

SSLC ಫಲಿತಾಂಶ ಪ್ರಕಟ:ಫಸ್ಟ್‌ ಟೈಂ ಶೇ.94.10 ರಷ್ಟು ಫಲಿತಾಂಶ

SSLC ಫಲಿತಾಂಶ ಪ್ರಕಟ:ಫಸ್ಟ್‌ ಟೈಂ ಶೇ.94.10 ರಷ್ಟು ಫಲಿತಾಂಶ
Author: Savina Naik
Posted By: Savina Naik
Updated: Apr 23, 2026 | 12:19 PM

ಬೆಂಗಳೂರು:    2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಶಿಕ್ಷಣ ಇಲಾಖೆಯ ವೆಬ್​​ಸೈಟ್​ನಲ್ಲಿ ಪ್ರಕಟವಾಗಿದೆ. ಈ ಬಾರಿ SSLC ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಮೂವರು ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದಿದ್ದಾರೆ. ರೂಪಾ ಚನಗೌಡ ಪಾಟೀಲ (ಬೆಳಗಾವಿ), ಜಾನವಿ (ಹಾಸನ), ಉತ್ಸವ ಪಾಟೀಲ (ಹಾಸನ) 625ರಲ್ಲಿ 625 ಅಂಕ ಪಡೆದವರಾಗಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಗುರುವಾರ ಮಧ್ಯಾಹ್ನ ಪ್ರಕಟವಾಗಿದೆ. ಸರ್ಕಾರ ತೃತೀಯ ಭಾಷಾ ವಿಷಯಕ್ಕೆ ಗ್ರೇಡ್ ಬದಲು ಅಂಕವನ್ನೇ ನೀಡಲು ತೀರ್ಮಾನಿಸಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪೈಕಿ 94.1% ಪಾಸಾಗಿದ್ದಾರೆ. ಪರೀಕ್ಷೆ ಬರೆದ 7 ಲಕ್ಷದ 70 ಸಾವಿರದ 209 ವಿದ್ಯಾರ್ಥಿಗಳ ಪೈಕಿ 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ದಕ್ಷಿಣ ಕನ್ನಡ ಪ್ರಥಮ, ಉಡುಪಿಗೆ ದ್ವಿತೀಯ ಸ್ಥಾನ ಮತ್ತು ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನ ಪಡೆದಿದೆ. ಕಲಬುರಗಿ ಕೊನೆಯ ಸ್ಥಾನ ಪಡೆದಿದೆ.

ವಿದ್ಯಾರ್ಥಿಗಳು karresults.nic.in ಮತ್ತು kseab.karnataka.gov.in ಮೂಲಕವೂ ಫಲಿತಾಂಶ ವೀಕ್ಷಿಸಿ ಅಂಕ ಪಟ್ಟಿ ಡೌನ್​ಲೋಡ್ ಮಾಡಿಕೊಳ್ಳಬಹುದಾಗಿದೆ. SMS, ವಾಟ್ಸಪ್‌ ಮೂಲಕವೂ ಫಲಿತಾಂಶ ಕಳುಹಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.