S Shorts

Cold Wave Alert | ರಾಜ್ಯದಲ್ಲಿ ಮತ್ತೆ ಚಳಿಯ ಆರ್ಭಟ: ಮುಂದಿನ 3 ದಿನ ತಾಪಮಾನ ಭಾರೀ ಕುಸಿತ!

Cold Wave Alert | ರಾಜ್ಯದಲ್ಲಿ ಮತ್ತೆ ಚಳಿಯ ಆರ್ಭಟ: ಮುಂದಿನ 3 ದಿನ ತಾಪಮಾನ ಭಾರೀ ಕುಸಿತ!
Author: Sagaradventure
Posted By: Sagaradventure
Updated: Dec 11, 2025 | 4:49 AM

​ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕೊಂಚ ಬಿಡುವು ನೀಡಿದ್ದ ಚಳಿ ಮತ್ತೆ ಹೆಚ್ಚಾಗುವ ಲಕ್ಷಣಗಳು ಗೋಚರಿಸಿವೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ರಾಜ್ಯಾದ್ಯಂತ ಮುಂದಿನ ಮೂರು ದಿನಗಳ ಕಾಲ ತಾಪಮಾನದಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆಯಿದ್ದು, ಚಳಿಯ ತೀವ್ರತೆ ಏರಿಕೆಯಾಗಲಿದೆ.

ಮುಂದಿನ ಮೂರು ದಿನಗಳಲ್ಲಿ ಕನಿಷ್ಠ ತಾಪಮಾನವು 12 ರಿಂದ 15 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಬೆಳಗಿನ ಜಾವ ಮತ್ತು ರಾತ್ರಿ ವೇಳೆ ಮೈಕೊರೆಯುವ ಚಳಿ ಅನುಭವಕ್ಕೆ ಬರಲಿದ್ದು, ಶೀತಗಾಳಿಯ ವಾತಾವರಣ ನಿರ್ಮಾಣವಾಗಲಿದೆ.

​ವಿಶೇಷವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಚಳಿಯ ಪ್ರಭಾವ ಹೆಚ್ಚಾಗಿರಲಿದೆ. ಗಡಿ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಭಾರೀ ಚಳಿ ಬೀಳುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಈ ಭಾಗದ ಜನತೆ ಮುಂಜಾನೆ ಮತ್ತು ರಾತ್ರಿ ವೇಳೆ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.