S Shorts

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು; ಒಂದೇ ಕುಟುಂಬದ ಮೂವರ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು; ಒಂದೇ ಕುಟುಂಬದ ಮೂವರ ದುರ್ಮರಣ
Author: Sagaradventure
Posted By: Sagaradventure
Updated: Oct 21, 2026 | 11:14 AM

ಕೊಡಗು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಕೆರೆಗೆ ಉರುಳಿ ಬಿದ್ದ ಪರಿಣಾಮ, ಕಾರಿನಲ್ಲಿದ್ದ ದಂಪತಿ ಹಾಗೂ ಅವರ ನಾಲ್ಕು ವರ್ಷದ ಹೆಣ್ಣು ಮಗು ನೀರಲ್ಲಿ ಮುಳುಗಿ ದಾರುಣವಾಗಿ ಸಾ*ವನ್ನಪ್ಪಿರುವ ಭೀಕರ ಘಟನೆ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದೆ.

ಹಬ್ಬದ ಸಂಭ್ರಮದ ನಡುವೆಯೇ ಈ ದುರಂತ ನಡೆದಿದ್ದು, ಮೃ*ತರ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ. ಪರಿಣಾಮವಾಗಿ ಇಡೀ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ. 

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾರು ಹಾಗೂ ಮೃ*ತದೇಹಗಳನ್ನು ಕೆರೆಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.