S Shorts

Kogilu Encroachment | ಕೋಗಿಲು ಲೇಔಟ್ ಭೂ ಒತ್ತುವರಿ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Kogilu Encroachment | ಕೋಗಿಲು ಲೇಔಟ್ ಭೂ ಒತ್ತುವರಿ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
Author: Meghana Gowda
Posted By: Meghana Gowda
Updated: Jan 8, 2026 | 7:40 AM

ಬೆಂಗಳೂರು: ಯಲಹಂಕದ ಕೋಗಿಲು ಲೇಔಟ್ (Kogilu Layout) ಒತ್ತುವರಿ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಭೂ ಕಬಳಿಕೆಯಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ವಾಸಿಂ ಬೇಗ್ ಮತ್ತು ವಿಜಯ್ ಕುಮಾರ್ ಬಂಧಿತ ಆರೋಪಿಗಳಾಗಿದ್ದು, ಇವರು ಬೆಲೆಬಾಳುವ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಂಡ ಆರೋಪ ಎದುರಿಸುತ್ತಿದ್ದಾರೆ.

ಈ ಇಬ್ಬರು ಆರೋಪಿಗಳ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಭೂ ಕಬಳಿಕೆ ನಿಷೇಧ ಕಾಯ್ದೆ ಸೇರಿದಂತೆ ವಿವಿಧ ಗಂಭೀರ ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ಎಫ್‌ಐಆರ್ (FIR) ದಾಖಲಿಸಿದ್ದರು.

ಬಂಧಿತ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ (Custody) ಪಡೆದುಕೊಂಡಿದ್ದಾರೆ. ಆರೋಪಿಗಳ ಮೇಲೆ ಕರ್ನಾಟಕ ಭೂ ಕಂದಾಯ ಕಾಯ್ದೆಯ 192(ಎ)(1), 192(ಬಿ), ಹಾಗೂ ಭೂ ಕಬಳಿಕೆ ನಿಷೇಧ ಕಾಯ್ದೆಯಡಿ (Karnataka Land Grabbing Prohibition Act) ಪ್ರಕರಣಗಳನ್ನು ಹೂಡಲಾಗಿದೆ.