S Shorts

ಕೋಲಾರದಲ್ಲಿ ಬೃಹತ್ ಪ್ರತಿಭಟನೆ: ಜಂತರ್ ಮಂತರ್ ಲಾಠಿ ಚಾರ್ಜ್ ಖಂಡಿಸಿ, ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ಕೋಲಾರದಲ್ಲಿ ಬೃಹತ್ ಪ್ರತಿಭಟನೆ: ಜಂತರ್ ಮಂತರ್ ಲಾಠಿ ಚಾರ್ಜ್ ಖಂಡಿಸಿ, ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ
Author: Sagaradventure
Posted By: Sagaradventure
Updated: Jul 23, 2026 | 2:51 PM

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್ ಖಂಡಿಸಿ ಕೋಲಾರದಲ್ಲಿ ಬೃಹತ್ ಪ್ರತಿಭಟನೆ ಭುಗಿಲೆದ್ದಿದೆ. ಕೋಲಾರದ ಮೆಕ್ಕೆ ಸರ್ಕಲ್‌ನಲ್ಲಿ SFI, NSUI ಹಾಗೂ ವಿವಿಧ ವಿದ್ಯಾರ್ಥಿ ಮತ್ತು ಯುವ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ ಈ ಹೋರಾಟದಲ್ಲಿ ಸಾವಿರಾರು ವಿದ್ಯಾರ್ಥಿಗಳು ಮತ್ತು ಮುಖಂಡರು ಭಾಗವಹಿಸಿದ್ದು, ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಮತ್ತು ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.

ಇದರ ಜೊತೆಗೆ, ಈ ಹಿಂದಿನ ಬೆಳವಣಿಗೆಗಳಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಸ್ಥರಿಗೆ ತಲಾ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು ಹಾಗೂ ಕೂಡಲೇ NET (ನೆಟ್) ಪರೀಕ್ಷೆಯನ್ನು ರದ್ದು ಮಾಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ಉಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.