S Shorts

ಕೋರಮಂಗಲದ ಹೋಟೆಲ್ ಬಳಿ ನಿಂತಿದ್ದ Audi ಕಾರಿನಲ್ಲಿ ಡೆಡ್ ಬಾಡಿ ಪತ್ತೆ!

ಕೋರಮಂಗಲದ ಹೋಟೆಲ್ ಬಳಿ ನಿಂತಿದ್ದ Audi ಕಾರಿನಲ್ಲಿ ಡೆಡ್ ಬಾಡಿ ಪತ್ತೆ!
Author: Sagaradventure
Posted By: Sagaradventure
Updated: Sep 20, 2026 | 3:25 PM

ರಾಜಧಾನಿ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣೆ ಸಮೀಪದ ಹೋಟೆಲ್ ಒಂದರ ಎದುರು ನಿಲ್ಲಿಸಲಾಗಿದ್ದ ಐಷಾರಾಮಿ ಆಡಿ ಕಾರಿನಲ್ಲಿ ವ್ಯಕ್ತಿಯೊಬ್ಬರ ಮೃ*ತದೇಹ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಭಾನುವಾರ (ಸೆಪ್ಟೆಂಬರ್ 20) ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದ್ದು, ಮೃತಪಟ್ಟ ವ್ಯಕ್ತಿಯನ್ನು ಅಕ್ಬರ್ ಎಂದು ಗುರುತಿಸಲಾಗಿದೆ. ಮಧ್ಯರಾತ್ರಿ ಸುಮಾರು 2:30 ರ ವೇಳೆಗೆ KA-51 MG 9786 ನೋಂದಣಿ ಸಂಖ್ಯೆಯ ಬಿಳಿ ಬಣ್ಣದ ಆಡಿ ಕಾರು ಬಂದು ಹೋಟೆಲ್ ಮುಂಭಾಗದಲ್ಲಿ ನಿಂತಿತ್ತು ಎಂದು ತಿಳಿದುಬಂದಿದೆ.

ಬೆಳಗ್ಗೆ ಹೋಟೆಲ್ ಸಿಬ್ಬಂದಿ ಕೆಲಸ ಆರಂಭಿಸಲು ಬಂದಾಗ, ಕಾರು ನಿಂತಿರುವುದನ್ನು ಹಾಗೂ ಅದರೊಳಗೆ ವ್ಯಕ್ತಿಯೊಬ್ಬರು ಇರುವುದನ್ನು ಗಮನಿಸಿದ್ದಾರೆ. ಕಾರಿನ ಗಾಜನ್ನು ತಟ್ಟಿ ಒಳಗಿದ್ದ ವ್ಯಕ್ತಿಯನ್ನು ಎಬ್ಬಿಸಲು ಯತ್ನಿಸಿದಾಗ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿರಲಿಲ್ಲ. ಇದರಿಂದ ಅನುಮಾನಗೊಂಡ ಹೋಟೆಲ್ ಸಿಬ್ಬಂದಿ ಕೂಡಲೇ ಸಮೀಪದಲ್ಲೇ ಇದ್ದ ಕೋರಮಂಗಲ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಕಾರನ್ನು ಪರಿಶೀಲಿಸಿದಾಗ ಕಾರಿನ ಒಳಗಿದ್ದ ವ್ಯಕ್ತಿ ಮೃ*ತಪಟ್ಟಿರುವುದು ದೃಢಪಟ್ಟಿದೆ.

ಘಟನಾ ಸ್ಥಳಕ್ಕೆ ಅಪರಾಧ ಸ್ಥಳ ಪರಿಶೀಲನಾ ತಂಡ (SOCO) ಹಾಗೂ ಕೋರಮಂಗಲ ಪೊಲೀಸರು ಭೇಟಿ ನೀಡಿ ಅಗತ್ಯ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ವ್ಯಕ್ತಿಗೆ ತೀವ್ರ ಹೃದಯಾಘಾತ ಸಂಭವಿಸಿ ಸಾ*ವನ್ನಪ್ಪಿರಬಹುದು ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ. ಮೃ*ತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.