S Shorts

ಗಾನ ಕೋಗಿಲೆ ಎಸ್.ಜಾನಕಿ ಇನ್ನಿಲ್ಲ: ಮೈಸೂರಿನ ಆಸ್ಪತ್ರೆಯಲ್ಲಿ ನಿಧನ!

ಗಾನ ಕೋಗಿಲೆ ಎಸ್.ಜಾನಕಿ ಇನ್ನಿಲ್ಲ: ಮೈಸೂರಿನ ಆಸ್ಪತ್ರೆಯಲ್ಲಿ ನಿಧನ!
Author: Sagaradventure
Posted By: Sagaradventure
Updated: Jul 11, 2026 | 8:39 PM

ದಕ್ಷಿಣ ಭಾರತದ ಖ್ಯಾತ ಹಿನ್ನೆಲೆ ಗಾಯಕಿ, ಕೋಟ್ಯಂತರ ಕನ್ನಡಿಗರ ನೆಚ್ಚಿನ ‘ಗಾನ ಕೋಗಿಲೆ’ ಎಸ್.ಜಾನಕಿ ಅವರು ವಿಧಿವಶರಾಗಿದ್ದಾರೆ. 88 ವರ್ಷ ವಯಸ್ಸಾಗಿದ್ದ ಅವರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ತಮ್ಮ ಅದ್ಭುತ ಕಂಠಸಿರಿಯಿಂದ ದಶಕಗಳ ಕಾಲ ಇಡೀ ಭಾರತೀಯ ಸಂಗೀತ ಪ್ರೇಮಿಗಳನ್ನು ರಂಜಿಸಿದ್ದ ಈ ದಿಗ್ಗಜ ಗಾಯಕಿಯ ಅಗಲಿಕೆಯಿಂದ ಸಂಗೀತ ಲೋಕ ಬಡವಾಗಿದೆ.

​ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್. ಜಾನಕಿ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಎಸ್.ಜಾನಕಿ ಅವರು, ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಹತ್ತಾರು ಭಾಷೆಗಳಲ್ಲಿ ಸಾವಿರಾರು ಮಧುರ ಗೀತೆಗಳಿಗೆ ಜೀವ ತುಂಬಿದ್ದ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ಸಹ ಕಲಾವಿದರು ಹಾಗೂ ಅಪಾರ ಅಭಿಮಾನಿಗಳು ತೀವ್ರ ಕಂಬನಿ ಮಿಡಿಯುತ್ತಿದ್ದಾರೆ.

https://www.instagram.com/reel/Dap_WJzyeZi/