ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ ವೇಳೆಗೆ ಮೆಜೆಸ್ಟಿಕ್, ಕಾರ್ಪೋರೆಷನ್ ಸೇರಿ ಹಲವೆಡೆ ತುಂತುರು ಮಳೆಯಾಗಿದೆ.
ಮುಂದಿನ ನಾಲ್ಕು ದಿನಗಳ ಕಾಲ ಬೆಂಗಳೂರಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಿ ಬೆಂಗಳೂರು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಿಗೆ ಏಪ್ರಿಲ್ 29ರಿಂದ ಮೇ 2ರವರೆಗೆ ಎಲ್ಲೋ ಅಲರ್ಟ್, ಗುಡುಗು ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆ, ಜನರಿಗೆ ಎಚ್ಚರಿಕೆ ಸೂಚನೆ ಇದೆ.
ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಇಂದಿನಿಂದ ಐದು ದಿನಗಳ ಕಾಲ ಮಳೆ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ಹವಾಮಾನ ಇಲಾಖೆಯ ವರದಿಯ ಅನ್ವಯ, ಇಂದಿನಿಂದ 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ, ಉತ್ತರ ಕರ್ನಾಟಕ, ಮಲೆನಾಡು ಹಾಗೂ ಮಧ್ಯ ಕರ್ನಾಟಕ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಏಪ್ರಿಲ್ 30 ರಂದು ಬೆಂಗಳೂರು ಸೇರಿ 24 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
