S Shorts

ಐಸಿಯುನಲ್ಲಿ ಇರುವೆ ಕಚ್ಚಿ ಶಿಶು ಸಾವು: ಮೈಸೂರಿನ ಆಸ್ಪತ್ರೆಯ ವಿರುದ್ಧ ಸಾರ್ವಜನಿಕರ ಆಕ್ರೋಶ

ಐಸಿಯುನಲ್ಲಿ ಇರುವೆ ಕಚ್ಚಿ ಶಿಶು ಸಾವು: ಮೈಸೂರಿನ ಆಸ್ಪತ್ರೆಯ ವಿರುದ್ಧ ಸಾರ್ವಜನಿಕರ ಆಕ್ರೋಶ
Author: Savina Naik
Posted By: Savina Naik
Updated: Apr 23, 2026 | 3:44 PM

ಮೈಸೂರು: ಚೆಲುವಾಂಬ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನವಜಾತ ಶಿಶುವೊಂದು ಇರುವೆ ಕಚ್ಚಿ ಮೃತಪಟ್ಟಿದೆ.

ಏಪ್ರಿಲ್ 15ರಂದು ಅವಧಿ ಪೂರ್ವ ಗಂಡು ಮಗುವಿನ ಜನನವಾಗಿತ್ತು. ಕೇವಲ 7 ತಿಂಗಳಿಗೆ ಹುಟ್ಟಿದ್ದ ಮಗು 1 ಕೆಜಿ 40 ಗ್ರಾಂ ಮಾತ್ರ ತೂಕ ಹೊಂದಿತ್ತು. ಈ ಹಿನ್ನೆಲೆ ಚೆಲುವಾಂಬ ಆಸ್ಪತ್ರೆಯ ಐಸಿಯುನಲ್ಲಿ ಶಿಶುವಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಮಗುವಿಗೆ ಇರುವೆ ಕಚ್ಚಿರುವ ಆರೋಪ ಕೇಳಿಬಂದಿದೆ. ತುಂಬಾ ಇರುವೆಗಳಿದ್ದ ಬಗ್ಗೆ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗೆ ಈ ಮೊದಲೇ ತಿಳಿಸಿದ್ದೆವು. ಆದರೆ ಸಿಹಿ ಕಾರಣಕ್ಕೆ ಒಂದೆರಡು ಇರುವೆಗಳು ಬಂದಿವೆ ಎಂಬ ಸಮಜಾಯಿಷಿಯನ್ನು ಅವರು ನೀಡಿದ್ದರು. ಈಗ ನೋಡಿದರೆ ಮಗುವೇ ತೀರಿಕೊಂಡಿದೆ ಎಂದು ಪೋಷಕರು ಕಣ್ಣೀರು ಹಾಕಿದ್ದಾರೆ.

ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯವೇ ಮಗುವಿನ ಸಾವಿಗೆ ಕಾರಣವೆಂದು ಪೋಷಕರು ದೂರುತ್ತಿದ್ದಾರೆ. ಆದರೆ ಆಸ್ಪತ್ರೆ ಆಡಳಿತ ಮಂಡಳಿ ಈ ಆರೋಪವನ್ನು ತಳ್ಳಿಹಾಕಿದ್ದು, ಮಗು ಅಕಾಲಿಕ ಜನನದಿಂದಾಗಿ ಸಾವನ್ನಪ್ಪಿದೆ ಎಂದು ಸ್ಪಷ್ಟಪಡಿಸಿದೆ.