S Shorts

ರಸ್ತೆ ದಾಟುತ್ತಿದ್ದ ಪಾದಚಾರಿಗೆ ಲಾರಿ ಡಿಕ್ಕಿ, ತೀವ್ರ ರಕ್ತಸ್ರಾವದಿಂದ ದಾರುಣ ಸಾ*ವು!

ರಸ್ತೆ ದಾಟುತ್ತಿದ್ದ ಪಾದಚಾರಿಗೆ ಲಾರಿ ಡಿಕ್ಕಿ, ತೀವ್ರ ರಕ್ತಸ್ರಾವದಿಂದ ದಾರುಣ ಸಾ*ವು!
Author: Sagaradventure
Posted By: Sagaradventure
Updated: Jul 4, 2026 | 12:07 PM

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ರಾಣಿಕ್ರಾಸ್ ಬಳಿ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ದಾರುಣವಾಗಿ ಸಾ*ವನ್ನಪ್ಪಿದ್ದಾರೆ. ಮೃ*ತಪಟ್ಟ ವ್ಯಕ್ತಿಯನ್ನು ಆಂಧ್ರಪ್ರದೇಶದ ಕದಿರಿ ಮೂಲದ 50 ವರ್ಷದ ಸೂರ್ಯನಾರಾಯಣ ರೆಡ್ಡಿ ಎಂದು ಗುರುತಿಸಲಾಗಿದೆ. ಹೆದ್ದಾರಿಯ ಒಂದು ಕಡೆಯಿಂದ ಮತ್ತೊಂದು ಕಡೆಗೆ ರಸ್ತೆ ದಾಟುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ತೀವ್ರ ರಕ್ತಸ್ರಾವವಾಗಿ ಅವರು ಕೊನೆಯುಸಿರೆಳೆದಿದ್ದಾರೆ.

ಲಾರಿ ಬಿಟ್ಟು ಚಾಲಕ ಎಸ್ಕೇಪ್

​ಮೃ*ತ ಸೂರ್ಯನಾರಾಯಣ ರೆಡ್ಡಿ ಅವರು ರಸ್ತೆ ದಾಟುತ್ತಿರುವಾಗ ಚಿಕ್ಕಬಳ್ಳಾಪುರ ಕಡೆಯಿಂದ ಅತಿವೇಗವಾಗಿ ಬಂದ ಉತ್ತರ ಪ್ರದೇಶ (UP) ನೋಂದಣಿಯ ಲಾರಿಯೊಂದು ಅವರ ಮೇಲೆ ಹರಿದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಪಾದಚಾರಿ ಸ್ಥಳದಲ್ಲೇ ಮೃ*ತಪಟ್ಟಿದ್ದು, ಅಪಘಾತ ಸಂಭವಿಸುತ್ತಿದ್ದಂತೆಯೇ ಗಾಬರಿಗೊಂಡ ಲಾರಿ ಚಾಲಕ, ವಾಹನವನ್ನು ಘಟನಾ ಸ್ಥಳದಲ್ಲೇ ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ.

ಪೊಲೀಸರ ಭೇಟಿ ಹಾಗೂ ತನಿಖೆ

​ಈ ಭೀಕರ ಅಪಘಾತದ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಮೃ*ತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಪರಾರಿಯಾಗಿರುವ ಲಾರಿ ಚಾಲಕನ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದು, ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.