ತುಮಕೂರು: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಕಳೆದ ಫೆಬ್ರವರಿ 9 ರಿಂದ ನಾಪತ್ತೆಯಾಗಿದ್ದ ಕರ್ನಾಟಕದ ತುಮಕೂರು ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಶ*ವವಾಗಿ ಪತ್ತೆಯಾಗಿದ್ದಾರೆ. ಈ ವಿಚಾರವನ್ನು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿ (Indian Consulate) ಭಾನುವಾರ ಅಧಿಕೃತವಾಗಿ ಖಚಿತಪಡಿಸಿದೆ.
ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಬರ್ಕ್ಲಿಯಲ್ಲಿ (UC Berkeley) ಸ್ನಾತಕೋತ್ತರ ಪದವಿ ಓದುತ್ತಿದ್ದ ಸಾಕೇತ್, ಫೆಬ್ರವರಿ 9 ರಂದು ನಾಪತ್ತೆಯಾಗಿದ್ದರು. ತೀವ್ರ ಹುಡುಕಾಟದ ನಂತರ, ಟಿಲ್ಡನ್ ರೀಜನಲ್ ಪಾರ್ಕ್‌ನಲ್ಲಿರುವ ‘ಅಂಜಾ’ ಕೆರೆಯ (Lake Anza) ಬಳಿ ಅವರ ಮೃ*ತದೇಹ ಪತ್ತೆಯಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಸಾಕೇತ್, ಚೆನ್ನೈ ಐಐಟಿಯಲ್ಲಿ (IIT Madras) ಕೆಮಿಕಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದರು. ಬಳಿಕ ಹೆಚ್ಚಿನ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳಿದ್ದರು. ಫೆಬ್ರವರಿ 9 ರಂದು ಕೊನೆಯದಾಗಿ ತಂದೆಯೊಂದಿಗೆ ಮಾತನಾಡಿದ್ದ ಅವರು ನಂತರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಆತಂಕಗೊಂಡ ಪೋಷಕರು ಕರ್ನಾಟಕ ಸರ್ಕಾರ ಮತ್ತು ವಿದೇಶಾಂಗ ಸಚಿವಾಲಯದ ಮೊರೆ ಹೋಗಿದ್ದರು.
ಸಾಕೇತ್ ಅವರ ಲ್ಯಾಪ್‌ಟಾಪ್ ಮತ್ತು ಪಾಸ್‌ಪೋರ್ಟ್ ಇದ್ದ ಬ್ಯಾಗ್ ಕೆರೆಯ ಸಮೀಪವೇ ಪತ್ತೆಯಾಗಿದೆ. ಅವರು ಖಿನ್ನತೆಯಿಂದ ಬಳಲುತ್ತಿದ್ದರೆಂಬ ಶಂಕೆ ವ್ಯಕ್ತವಾಗಿದ್ದು, ಇದು ಆತ್ಮಹ*ತ್ಯೆಯೇ ಎಂಬ ಕೋನದಲ್ಲಿಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಸಾ*ವಿಗೆ ನಿಖರ ಕಾರಣವೇನೆಂದು ಮರಣೋತ್ತರ ಪರೀಕ್ಷೆಯ ನಂತರವೇ ತಿಳಿಯಲಿದೆ.
“ಸಾಕೇತ್ ಅವರ ಮೃ*ತದೇಹವನ್ನು ಭಾರತಕ್ಕೆ ಕಳುಹಿಸಲು (Repatriation) ಬೇಕಾದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ಕುಟುಂಬಸ್ಥರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿದ್ದೇವೆ” ಎಂದು ಭಾರತೀಯ ರಾಯಭಾರ ಕಚೇರಿ ಟ್ವೀಟ್ ಮೂಲಕ ತಿಳಿಸಿದೆ. ಮಗನ ಸಾ*ವಿನ ಸುದ್ದಿ ಕೇಳಿ ತುಮಕೂರಿನಲ್ಲಿರುವ ಪೋಷಕರು ಶೋಕಸಾಗರದಲ್ಲಿ ಮುಳುಗಿದ್ದಾರೆ.
Americaದಲ್ಲಿ ನಾಪತ್ತೆಯಾಗಿದ್ದ Tumakuruನ ವಿದ್ಯಾರ್ಥಿ ಶ*ವವಾಗಿ ಪತ್ತೆ: ಕೆರೆಯ ಬಳಿ ಸಿಕ್ತು ಮೃ*ತದೇಹ!
