S Shorts

ರಾಹುಲ್ ಗಾಂಧಿ ಹೇಳಿದ್ರೆ CM ಸ್ಥಾನಕ್ಕೆ ಸಿದ್ದರಾಮಯ್ಯ ರಿಸೈನ್: ಸಚಿವ ಕೆ.ಎನ್ ರಾಜಣ್ಣ ಸ್ಫೋಟಕ ಹೇಳಿಕೆ!

ರಾಹುಲ್ ಗಾಂಧಿ ಹೇಳಿದ್ರೆ CM ಸ್ಥಾನಕ್ಕೆ ಸಿದ್ದರಾಮಯ್ಯ ರಿಸೈನ್: ಸಚಿವ ಕೆ.ಎನ್ ರಾಜಣ್ಣ ಸ್ಫೋಟಕ ಹೇಳಿಕೆ!
Author: Meghana Gowda
Posted By: Meghana Gowda
Updated: Dec 24, 2025 | 4:44 AM

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಕುರಿತಾದ ‘ಒಪ್ಪಂದ’ದ (Power Sharing Pact) ಚರ್ಚೆ ಮತ್ತೆ ಕಾವೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರನ್ನು ಭೇಟಿಯಾಗಿ ಚರ್ಚಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಕೆ.ಎನ್. ರಾಜಣ್ಣ (K.N. Rajanna), ಹೈಕಮಾಂಡ್ ಸೂಚಿಸಿದರೆ ಸಿದ್ದರಾಮಯ್ಯ ಅವರು ಸ್ಥಾನ ಬಿಟ್ಟುಕೊಡಲು ಸಿದ್ಧರಿದ್ದಾರೆ ಎಂಬ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ರಾಹುಲ್ ಗಾಂಧಿ (Rahul Gandhi) ಅವರು ಹೇಳಿದರೆ ನಾನು ಒಂದು ನಿಮಿಷವೂ ಅಧಿಕಾರದಲ್ಲಿ ಇರುವುದಿಲ್ಲ, ತಕ್ಷಣವೇ ರಾಜೀನಾಮೆ ನೀಡುತ್ತೇನೆ ಎಂದು ಸ್ವತಃ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ” ಎಂದು ರಾಜಣ್ಣ ತಿಳಿಸಿದ್ದಾರೆ.

ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ‘ಯಾವುದೇ ಒಪ್ಪಂದ ಆಗಿಲ್ಲ’ ಎನ್ನುತ್ತಾರೆ. ಆದರೆ ಡಿ.ಕೆ. ಶಿವಕುಮಾರ್ (D.K. Shivakumar) ಅವರು ‘ಒಪ್ಪಂದ ಆಗಿದೆ’ ಎನ್ನುತ್ತಿದ್ದಾರೆ. ಈ ಪರಸ್ಪರ ವಿರೋಧಾಭಾಸದ ಹೇಳಿಕೆಗಳಿಂದ ಕಾರ್ಯಕರ್ತರಲ್ಲಿ ಗೊಂದಲ ಮೂಡುತ್ತಿದೆ.  ಹೈಕಮಾಂಡ್ ಗಮನಕ್ಕೆ ಬಾರದೆ ಏನೂ ನಡೆಯಲು ಸಾಧ್ಯವಿಲ್ಲ. ಆದ್ದರಿಂದ ಎಐಸಿಸಿ (AICC) ಹೈಕಮಾಂಡ್ ತಕ್ಷಣವೇ ಈ ಗೊಂದಲ ನಿವಾರಿಸಬೇಕು ಎಂದು ರಾಜಣ್ಣ ಒತ್ತಾಯಿಸಿದ್ದಾರೆ.

ಸಚಿವ ರಾಜಣ್ಣ ಅವರ ಈ ಹೇಳಿಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಬಲಿಗರಲ್ಲಿ ಚರ್ಚೆಗೆ ಕಾರಣವಾಗಿದೆ. ಹೈಕಮಾಂಡ್ ಮಟ್ಟದಲ್ಲಿ ಏನೆಲ್ಲಾ ಮಾತುಕತೆ ನಡೆದಿದೆ ಎಂಬುದು ಈಗ ಕುತೂಹಲ ಮೂಡಿಸಿದೆ.