S Shorts

ಸ್ಟಿಂಗ್‌ ಕೇಸ್‌ಗೆ ಸ್ಫೋಟಕ ಟ್ವಿಸ್ಟ್: ಸಂತ್ರಸ್ತೆಯ ವಿಡಿಯೋ ರೆಕಾರ್ಡ್ ಮಾಡಿ ದೂರು ಮುಚ್ಚಿಹಾಕಲು ಕೃಪಾ ಆಳ್ವಾ ಯತ್ನ?

ಸ್ಟಿಂಗ್‌ ಕೇಸ್‌ಗೆ ಸ್ಫೋಟಕ ಟ್ವಿಸ್ಟ್: ಸಂತ್ರಸ್ತೆಯ ವಿಡಿಯೋ ರೆಕಾರ್ಡ್ ಮಾಡಿ ದೂರು ಮುಚ್ಚಿಹಾಕಲು ಕೃಪಾ ಆಳ್ವಾ ಯತ್ನ?
Author: Sagaradventure
Posted By: Sagaradventure
Updated: Nov 3, 2026 | 1:37 PM

ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ‘ಸ್ಟಿಂಗ್ ಆಪರೇಷನ್’ ಪ್ರಕರಣಕ್ಕೆ ಇದೀಗ ರೋಚಕ ಹಾಗೂ ಗಂಭೀರ ತಿರುವು ಲಭಿಸಿದೆ. ಲೈಂಗಿಕ ಕಿರುಕುಳಕ್ಕೊಳಗಾಗಿ ದೂರು ನೀಡಿದ್ದ ಸಂತ್ರಸ್ತೆಯ ದೂರನ್ನು ಕಾನೂನುಬದ್ಧವಾಗಿ ತನಿಖೆಗೆ ಒಳಪಡಿಸದೆ, ಪ್ರಕರಣವನ್ನು ಉದ್ದೇಶಪೂರ್ವಕವಾಗಿ ಮುಚ್ಚಿಹಾಕಲು ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಯತ್ನಿಸಿದ್ದರು ಎಂಬ ಸ್ಫೋಟಕ ಆರೋಪ ಕೇಳಿಬಂದಿದೆ.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷೆಯೂ ಆಗಿರುವ ಕೃಪಾ ಆಳ್ವಾ ಅವರು 2023ರಲ್ಲೇ ಸಂತ್ರಸ್ತೆಯ ವಿಡಿಯೋವನ್ನು ರೆಕಾರ್ಡ್ ಮಾಡಿದ್ದರು ಎನ್ನಲಾಗಿದೆ. 

ಆದರೆ, ನೊಂದ ಸಂತ್ರಸ್ತೆಗೆ ನ್ಯಾಯ ಒದಗಿಸಲು ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಬದಲು, ಆಕೆಯ ದೂರನ್ನು ಗೌಪ್ಯವಾಗಿ ಮುಚ್ಚಿಹಾಕಲು ಯತ್ನಿಸಿದ್ದರು ಎಂಬ ಈ ಗಂಭೀರ ಆರೋಪವು ಇದೀಗ ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ.