ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಂಚುಗಾರನಹಳ್ಳಿ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಮುರುಗೇಶ್ (35) (Murugesh) ಎಂದು ಗುರುತಿಸಲಾಗಿದ್ದು, ಈತ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಕಲ್ಲಿನ ಕಂಬಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬೈಕ್‌ನಲ್ಲಿದ್ದ ಇತರರಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಭೇಟಿ ನೀಡಿದ ಚನ್ನಗಿರಿ ಪೊಲೀಸರು (Channagiri Police) ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
