S Shorts

ಕಾರವಾರದಲ್ಲಿ ಭೀಕರ ಅಪಘಾತ; ಹಳ್ಳಿ ಹೈದ ಪ್ಯಾಟೆಗೆ ಬಂದ ಖ್ಯಾತಿಯ ಬಾವತೀಶ್ ಸ್ಥಳದಲ್ಲೇ ಸಾ*ವು

ಕಾರವಾರದಲ್ಲಿ ಭೀಕರ ಅಪಘಾತ; ಹಳ್ಳಿ ಹೈದ ಪ್ಯಾಟೆಗೆ ಬಂದ ಖ್ಯಾತಿಯ ಬಾವತೀಶ್ ಸ್ಥಳದಲ್ಲೇ ಸಾ*ವು
Author: Meghana Gowda
Posted By: Meghana Gowda
Updated: Mar 25, 2026 | 8:58 AM

ಕಾರವಾರ: ಖ್ಯಾತ ರಿಯಾಲಿಟಿ ಶೋ ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಅವರು ಬುಧವಾರ ಯಲ್ಲಾಪುರ ತಾಲೂಕಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

 ಘಟನೆಯ ವಿವರ:

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ವಾಡಗರಡೊಳ್ಳಿ ನಿವಾಸಿಯಾದ ಬಾವತೀಶ್  ಅವರು ತಮ್ಮ ಟಿವಿಎಸ್ ಮೊಫೆಡ್ (TVS Moped) ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಯಲ್ಲಾಪುರ ತಾಲೂಕಿನ ಕೋಳಿಕೆರೆ ಸಮೀಪ ರಸ್ತೆ ಬದಿಯಲ್ಲಿ ನಿಂತಿದ್ದ KSRTC ಬಸ್‌ಗೆ ಅತೀ ವೇಗದಲ್ಲಿ ಬಂದ ಬೌತಿಶ್ ಅವರ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ತಕ್ಷಣವೇ ಬೆಂಕಿ ಕಾಣಿಸಿಕೊಂಡು ,ಬಾವತೀಶ್ ಅವರು ಸ್ಥಳದಲ್ಲೇ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾರೆ.

 ರಿಯಾಲಿಟಿ ಶೋ ಮೂಲಕ ಜನಪ್ರಿಯತೆ:

ಬೌತಿಶ್ ಅವರು ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ರಿಯಾಲಿಟಿ ಶೋ ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3 (Halli Haida Pyateg Banda) ರಲ್ಲಿ ಸ್ಪರ್ಧಿಯಾಗಿ ಭಾಗವಹಿಸುವ ಮೂಲಕ ನಾಡಿನಾದ್ಯಂತ ಮನೆಮಾತಾಗಿದ್ದರು. ಹಳ್ಳಿಯ ಸೊಗಡು ಮತ್ತು ಚಟುವಟಿಕೆಯಿಂದ ಜನಮನ ಗೆದ್ದಿದ್ದ ನಟನ ಸಾವು ಅವರ ಅಭಿಮಾನಿಗಳಿಗೆ ಮತ್ತು ಕುಟುಂಬಕ್ಕೆ ಭಾರಿ ಆಘಾತ ನೀಡಿದೆ.

ಘಟನೆ ಸಂಭವಿಸಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಯಲ್ಲಾಪುರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.