S Shorts

ಬೈಕ್‌ಗೆ Ambulance ಡಿಕ್ಕಿ, ಸವಾರ ಸ್ಥಳದಲ್ಲೇ ಸಾ*ವು; ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ!

ಬೈಕ್‌ಗೆ Ambulance ಡಿಕ್ಕಿ, ಸವಾರ ಸ್ಥಳದಲ್ಲೇ ಸಾ*ವು; ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ!
Author: Sagaradventure
Posted By: Sagaradventure
Updated: Jul 16, 2026 | 11:12 AM

ತುಮಕೂರು ಜಿಲ್ಲೆಯ ಶಿರಾ ನಗರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅತಿ ವೇಗವಾಗಿ ಬಂದ ಆಂಬ್ಯುಲೆನ್ಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ನಡೆದ ಈ ಭೀಕರ ಅಪಘಾತದ ದೃಶ್ಯವು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಶಿರಾ ತಾಲೂಕಿನ ಚಂದನಗುಂಟೆ ಗ್ರಾಮದ ನಿವಾಸಿ ಶಿವಣ್ಣ (55) ಮೃತಪಟ್ಟ ದುರ್ದೈವಿ. ಇವರು ವೃತ್ತಿಯಲ್ಲಿ ಮೊಟ್ಟೆ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ನಿನ್ನೆ ರಾತ್ರಿ ಶಿರಾ ನಗರದ ರೆಸಿಡೆನ್ಸಿ ಸ್ಕೂಲ್ ಮುಂಭಾಗದ ರಸ್ತೆಯಲ್ಲಿ ಶಿವಣ್ಣ ಅವರು ತಮ್ಮ ಬೈಕ್‌ನಲ್ಲಿ ಯೂಟರ್ನ್ (U-Turn) ತೆಗೆದುಕೊಳ್ಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ರಸ್ತೆಯಲ್ಲಿ ಅತಿ ವೇಗವಾಗಿ ಬಂದ ಆಂಬ್ಯುಲೆನ್ಸ್, ಯೂಟರ್ನ್ ಪಡೆಯುತ್ತಿದ್ದ ಬೈಕ್‌ಗೆ ರಭಸವಾಗಿ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಶಿವಣ್ಣ ಅವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಶಿರಾ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಈ ಅಪಘಾತಕ್ಕೆ ಸಂಬಂಧಿಸಿದಂತೆ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.