S Shorts

ಮರ್ಮಾಂಗಕ್ಕೆ ಹೊಲಿಗೆ ಹಾಕದೆ ಡಿಶ್ಚಾರ್ಜ್ ಮಾಡಿದ ವೈದ್ಯರು! ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ

ಮರ್ಮಾಂಗಕ್ಕೆ ಹೊಲಿಗೆ ಹಾಕದೆ ಡಿಶ್ಚಾರ್ಜ್ ಮಾಡಿದ ವೈದ್ಯರು!  ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ
Author: Savina Naik
Posted By: Savina Naik
Updated: Apr 22, 2026 | 1:56 PM

ಬೆಂಗಳೂರು: ಮರ್ಮಾಂಗಕ್ಕೆ ಶಸ್ತ್ರಚಿಕಿತ್ಸೆ ನಡೆಸಿ, ಹೊಲಿಗೆ ಹಾಕದೆ ಡಿಸ್ಚಾರ್ಜ್ ಮಾಡಿದ್ದರಿಂದ, ಚಿಕಿತ್ಸೆ ಸಿಗದೆ ಫುಟ್‌ಪಾತ್‌ನಲ್ಲೇ ನರಳಿ ರೋಗಿ ಪ್ರಾಣ ಬಿಟ್ಟಿರುವ ಘಟನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ  ನಡೆದಿದೆ.

ಶಾ ನವಾಜ್ (45)  ಈತ ಖಾಸಗಿ ಸಂಸ್ಥೆಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ. ಮರ್ಮಾಂಗದಲ್ಲಿ ಗಡ್ಡೆ ಬೆಳೆದ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಮರ್ಮಾಂಗದಲ್ಲಿ ಗಡ್ಡೆ ಬೆಳೆದ ಕಳೆದ ಒಂದೂವರೆ ತಿಂಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗಕ್ಕೆ ಅಡ್ಮಿಟ್ ಆಗಿದ್ದರಂತೆ. ಇನ್​ಫೆಕ್ಷನ್ ಆಗಿದೆ ಅಂತ ಹೇಳಿ ದಾಖಲು ಮಾಡಿಕೊಂಡಿದ್ದ ವೈದ್ಯರು ಬಳಿಕ ಮರ್ಮಾಂಗವನ್ನು ಕೊಯ್ದು ಆಪರೇಷನ್​​ ಮಾಡಿದ್ದಾರೆ.

ಕೆಲ ದಿನಗಳ ಬಳಿಕ ಪ್ಲಾಸ್ಟಿಕ್ ಸರ್ಜರಿ ವಿಭಾಗಕ್ಕೆ ಹೋಗುವಂತೆ ಸಿಬ್ಬಂದಿ ಹೇಳಿದ್ದರಂತೆ. ಆದರೆ ಗಾಯ ಇನ್ನೂ ಆರಿಲ್ಲ ಅಂತ ಸರ್ಜರಿ ವಿಭಾಗ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದರು. ಅಪರೇಷನ್ ಹಾಗೂ ಪ್ಲಾಸ್ಟಿಕ್ ಸರ್ಜರಿ ವಿಭಾಗದ ಸಿಬ್ಬಂದಿ ಸಮನ್ವಯತೆ ಕೊರತೆ ಕಾರಣ ರೋಗಿ ಗಂಭೀರ ಸ್ಥಿತಿಯಲ್ಲಿ ಇರುವಾಗಲೇ ಡಿಸ್ಚಾರ್ಜ್ ಆಗುವಂತೆ ಒತ್ತಡ ಹೇರಲಾಗಿದೆ. ಕೊನೆಗೆ ಕೊಯ್ದಿದ್ದ ಮರ್ಮಾಂಗಕ್ಕೆ ಹೊಲಿಗೆ ಕೂಡ ಮಾಡದೇ ಸಿಬ್ಬಂದಿಯೇ ರೋಗಿಯನ್ನ ಕಳುಹಿಸಿರುವ ಆರೋಪ ಕೇಳಿಬಂದಿದೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯರ ತೀವ್ರ ನಿರ್ಲಕ್ಷ್ಯದಿಂದ ಶಾ ನವಾಜ್  ಮರ್ಮಾಂಗದ ಭಾದೆ ತಾಳಲಾರದೆ ನವಾಜ್ ನರಳಿ ನರಳಿ ಪ್ರಾಣ ಬಿಟ್ಟಿದ್ದಾನೆ.  ಮನೆಗೆ ಆಧಾರವಾಗಿದ್ದ ನವಾಜ್​ ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಗಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.