ಹಾಸನ: ಜಿಲ್ಲೆಯ ಹೊಳೆನರಸೀಪುರ (Holenarasipura) ತಾಲೂಕಿನ ಮಾಕವಳ್ಳಿ ಗ್ರಾಮದಲ್ಲಿ100 ಅಡಿ ಎತ್ತರದಿಂದ ಕಾರ್ಮಿಕ ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಮೃತನನ್ನು ಆಕಾಶ್ (31) ( Akash)ಎಂದು ಗುರುತಿಸಲಾಗಿದ್ದು, ಈತ ಓವರ್‌ಹೆಡ್ ಟ್ಯಾಂಕ್‌ಗೆ ಅಳವಡಿಸಲಾಗಿದ್ದ ಕಬ್ಬಿಣದ ರಾಡ್ (Iron Rod) ಮೇಲೆ ನಿಂತು ಪೇಂಟ್ ಕೆಲಸ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಕಬ್ಬಿಣದ ರಾಡ್ ಇದ್ದಕ್ಕಿದ್ದಂತೆ ಮುರಿದಿದೆ. ಇದರಿಂದ ಆಕಾಶ್ ಗೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ.
ಘಟನೆ ನಡೆದ ತಕ್ಷಣ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ (Police)ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮತ್ತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
