ಮುಂಬೈ: ಭಾರತದ ವೇಗದ ಬೌಲರ್ ಮತ್ತು ಐಪಿಎಲ್‌ನಲ್ಲಿ ಆರ್‌ಸಿಬಿ (RCB) ತಂಡದ ಪರವಾಗಿ ಆಡುವ ಯಶ್ ದಯಾಳ್, ತಮ್ಮ ದೀರ್ಘಕಾಲದ ಗೆಳತಿ, ಪ್ರಸಿದ್ಧ ಕಂಟೆಂಟ್ ಕ್ರಿಯೇಟರ್ ಶ್ವೇತಾ ಪುಂಡೀರ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಯಶ್ ದಯಾಳ್, ಶ್ವೇತಾ ಪುಂಡಿರ್ ಅವರ ವಿವಾಹವು ಫೆಬ್ರವರಿ 4 ರಂದು ನೋಯ್ಡಾದಲ್ಲಿ ನಡೆಯಿತು. ಎರಡೂ ಕುಟುಂಬದ ಸಂಬಂಧಿಗಳು ಮತ್ತು ಆಪ್ತ ಸ್ನೇಹಿತರು ಮಾತ್ರ ಮದುವೆಯಲ್ಲಿ ಭಾಗವಹಿಸಿದ್ದರು. ಅವರ ವಿವಾಹದ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ.
ಈ ವಿವಾಹ ಮಹೋತ್ಸವವು ಅತ್ಯಂತ ಆಪ್ತರು ಮತ್ತು ಕುಟುಂಬ ಸದಸ್ಯರ ಸಮ್ಮುಖದಲ್ಲಿ ಅತ್ಯಂತ ಸರಳವಾಗಿ ಹಾಗೂ ಗೌಪ್ಯವಾಗಿ ನಡೆದಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ, ಅಭಿಮಾನಿಗಳು ಮತ್ತು ಕ್ರಿಕೆಟ್ ಲೋಕದ ಗಣ್ಯರು ಶುಭಕೋರಿದ್ದಾರೆ.
ದೆಹಲಿ ನಿವಾಸಿಯಾಗಿರುವ ಶ್ವೇತಾ ಪುಂಡೀರ್ ಅವರು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಪ್ರಸಿದ್ಧರಾಗಿರುವ ಕಂಟೆಂಟ್ ಕ್ರಿಯೇಟರ್ ಆಗಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಸುಮಾರು 600,000 ಫಾಲೋವರ್ಸ್ ಹೊಂದಿದ್ದಾರೆ. ಅವರ ಇನ್‌ಸ್ಟಾಗ್ರಾಮ್ ಬಯೋ ಪ್ರಕಾರ, ಶ್ವೇತಾ ತಮ್ಮನ್ನು ಕಲಾವಿದೆ, ವಿಷಯ ಸೃಷ್ಟಿಕರ್ತ ಮತ್ತು ವ್ಲಾಗರ್ ಎಂದು ಗುರುತಿಸಲಾಗಿದೆ.
ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದ ಯಶ್ ದಯಾಳ್, ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ಪ್ರಮುಖ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ. ಆರ್‌ಸಿಬಿ ಫ್ರಾಂಚೈಸಿ ಅವರನ್ನು ಐಪಿಎಲ್ 2026 ಗಾಗಿ ₹5 ಕೋಟಿಗೆ ಉಳಿಸಿಕೊಂಡಿತು. ಅವರು 2022 ರಲ್ಲಿ ಗುಜರಾತ್ ಟೈಟಾನ್ಸ್ ಪರ ಆಡುವ ಮೂಲಕ ಐಪಿಎಲ್‌ಗೆ ಪಾದಾರ್ಪಣೆ ಮಾಡಿದರು. ನಂತರ, 2023 ರಲ್ಲಿ, ರಿಂಕು ಸಿಂಗ್ ತಮ್ಮ ಓವರ್‌ನಲ್ಲಿ ಸತತ ಐದು ಸಿಕ್ಸರ್‌ಗಳನ್ನು ಬಾರಿಸಿ, ಅವರನ್ನು ಬೆಳಕಿಗೆ ತಂದರು. ಮುಂದಿನ ಋತುವಿನಲ್ಲಿ ಆರ್‌ಸಿಬಿ ಪರ ಆಡುವ ಮೂಲಕ ಅವರು ಬಲವಾದ ಪುನರಾಗಮನ ಮಾಡಿದರು. ಇದೀಗ ಐಪಿಎಲ್ 2026 ಪ್ರಾರಂಭವಾಗುವ ಮೊದಲು, ಆರ್‌ಸಿಬಿ ವೇಗಿ ಯಶ್ ದಯಾಳ್ ತಮ್ಮ ಜೀವನದಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ.
ಕಳೆದ ವರ್ಷ, ಜೈಪುರದ 17 ವರ್ಷದ ಯುವತಿಯನ್ನು ಎರಡು ವರ್ಷಗಳ ಕಾಲ ಬ್ಲ್ಯಾಕ್‌ಮೇಲ್ ಮಾಡಿ ಅತ್ಯಾಚಾರ ಮಾಡಿದ ಆರೋಪ ಯಶ್ ದಯಾಳ್ ಮೇಲಿತ್ತು. ಜೈಪುರದ ಸಂಗನೇರ್ ಸದರ್ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗಾಜಿಯಾಬಾದ್‌ನ ಮಹಿಳೆಯೊಬ್ಬರು ಮದುವೆಯ ಸುಳ್ಳು ನೆಪದಲ್ಲಿ ತನ್ನನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದರು.
